ADVERTISEMENT

ಕ್ಯಾಸಿನೊ ತೆರೆಯುವ ನಿರ್ಧಾರ ಸರಿಯಲ್ಲ: ಸಂಸದೆ ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 9:45 IST
Last Updated 25 ಫೆಬ್ರುವರಿ 2020, 9:45 IST
ಸಂಸದೆ ಶೋಭಾ ಕರಂದ್ಲಾಜೆ
ಸಂಸದೆ ಶೋಭಾ ಕರಂದ್ಲಾಜೆ   

ಉಡುಪಿ: ರಾಜ್ಯದಲ್ಲಿಕ್ಯಾಸಿನೊ ಕೇಂದ್ರಗಳನ್ನು ತೆರೆಯುವುದು ಬಿಜೆಪಿ ವಿಚಾರಧಾರೆಗಳಿಗೆ ವಿರುದ್ಧವಾಗಿದೆ. ಸಮಾಜವನ್ನು ದಾರಿತಪ್ಪಿಸುವ ಕೆಲಸಗಳು ಸರಿಯಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕ್ಯಾಸಿನೋ ಕೇಂದ್ರಗಳನ್ನು ತೆರೆಯುವ ಚಿಂತನೆ ಸರ್ಕಾರದ ಮುಂದಿಲ್ಲ ಎಂದರು.

ಪಾಕಿಸ್ತಾನದ ವಿಚಾರವಾಗಿ ಭಾರತಕ್ಕೆ ಅಮೆರಿಕಾದ ಬೆಂಬಲ ಬೇಕಿತ್ತು. ಟ್ರಂಪ್ ಭಾರತದ ನೆಲದಲ್ಲಿ ನಿಂತು ಭಯೋತ್ಪಾದನೆ ವಿರುದ್ಧ ಮಾತನಾಡಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಪಾಕಿಸ್ತಾನಕ್ಕೆ ಕಟುವಾದ ಸಂದೇಶ ರವಾನೆಯಾದಂತಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ADVERTISEMENT

ಯಡಿಯೂರಪ್ಪ ಅವರಿಗೆ 77 ವರ್ಷ ತುಂಬಿದೆ. ಇಳಿ ವಯಸ್ಸಿನಲ್ಲೂ ರಾಜ್ಯದಾದ್ಯಂತ ನಿರಂತರ ಪ್ರವಾಸ ಮಾಡುತ್ತಿರುವ ಮುಖ್ಯಮಂತ್ರಿಗೆ ಶುಭವಾಗಲಿ. ರಾಜ್ಯದ ಜನರ, ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮತ್ತಷ್ಟು ಮಾಡಲಿ ಎಂದು ಶೋಭಾ ಕರಂದ್ಲಾಜೆ ಹಾರೈಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.