ADVERTISEMENT

ಜಿಂದಾಲ್‌ಗೆ ಭೂಮಿ: ಕಮಿಷನ್ ಏಜೆಂಟರ ಕೈವಾಡ

​ಪ್ರಜಾವಾಣಿ ವಾರ್ತೆ
Published 10 ಜೂನ್ 2019, 15:32 IST
Last Updated 10 ಜೂನ್ 2019, 15:32 IST
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ   

ಉಡುಪಿ:ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿ ಜಿಂದಾಲ್ ಕಂಪೆನಿಗೆ 3,666 ಎಕರೆ ಭೂಮಿಯನ್ನು ಕ್ರಯ ಮಾಡಿಕೊಡಲು ಮುಂದಾಗಿದೆ. ಈ ಒಪ್ಪಂದದಲ್ಲಿ ಕಮಿಷನ್‌ ಏಜೆಂಟರ ಕೈವಾಡವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಕಚೇರಿಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ಒಪ್ಪಂದವನ್ನು ಪಾಲಿಸದ ಜಿಂದಾಲ್ ಕಂಪೆನಿಗೆ ರಾಜ್ಯ ಸರ್ಕಾರ ಅನುಕೂಲ ಮಾಡಿಕೊಡುತ್ತಿದೆ. ಈ ಸಂಬಂಧ ಸರ್ಕಾರವನ್ನು ಬಡಿದೆಬ್ಬಿಸಲು ಬಿಜೆಪಿ ರಾಜ್ಯದಾದ್ಯಂತ ಜೂನ್ 14ರಿಂದ ಹೋರಾಟ ಮಾಡಲಿದೆ ಎಂದು ತಿಳಿಸಿದರು.

ಮೈತ್ರಿ ಸರ್ಕಾರದಲ್ಲಿ ಯಾವುದೂ ನೆಟ್ಟಗಿಲ್ಲ.ರಾಮಲಿಂಗ ರೆಡ್ಡಿ, ರೋಷನ್‌ ಬೇಗ್ ಪಕ್ಷದ ವಿರುದ್ಧವೇ ಸಿಡಿದೆದ್ದಿದ್ದಾರೆ. ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ವಿಶ್ವನಾಥ್ರಾಜೀನಾಮೆ ನೀಡಿದ್ದಾರೆ. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ.ಸಚಿವ ಸಂಪುಟ ವಿಸ್ತರಣೆ ಬಳಿಕ ಸಮಸ್ಯೆ ಮತ್ತಷ್ಟು ಉಲ್ಬಣವಾಗಲಿದ್ದು, ಅಲ್ಲಿಯವರೆಗೂ ಬಿಜೆಪಿ ಕಾದುನೋಡುತ್ತೇವೆ ಎಂದು ಶೋಭಾ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.