ಉಡುಪಿ: ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಕೋವಿಡ್–19 ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಶಿಕ್ಷಕರ ಹಾಗೂ ಮಕ್ಕಳ ರಕ್ಷಣೆಯ ದೃಷ್ಟಿಯಿಂದ ಉತ್ತಮ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.
ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶಾಲೆಗಳಲ್ಲಿ ಮಕ್ಕಳು ಅಂತರ ಕಾಯ್ದುಕೊಳ್ಳುವುದು ಬಹಳ ಕಷ್ಟ. ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ. ಹಾಗಾಗಿ, ಈ ವರ್ಷ ಶಾಲೆಗಳನ್ನು ತೆರೆಯುವುದು ಬೇಡ. ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ, ಮುಂದಿನ ವರ್ಷ ಸೋಂಕು ನಿಯಂತ್ರಣಕ್ಕೆ ಬಂದರೆ ಶಾಲೆಗಳನ್ನು ಆರಂಭಿಸುವುದು ಒಳಿತು ಎಂದು ಶೋಭಾ ಸಲಹೆ ನೀಡಿದರು.
ಈ ವರ್ಷ ಎಸ್ಸೆಸ್ಸೆಲ್ಸಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಬಗ್ಗೆ ಹಾಗೂ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಗಮನ ಹರಿಸಲಿ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.