ಉಡುಪಿ: ಹಾಥರಸ್‌ನಲ್ಲಿ ನಡೆದ ದಲಿತ ಯುವತಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿಗೆ ಅವಮಾನ ಮಾಡಲು ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ಇದರ ಹಿಂದೆ ಎಸ್‌ಡಿಪಿಐ, ಪಿಎಫ್‌ಐ ಕೈವಾಡ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಷಡ್ಯಂತ್ಯದ ಹಿಂದೆ ಭಯೋತ್ಪಾದಕರ ಕುಮ್ಮಕ್ಕು ಇದ್ದು, ಎನ್‌ಐಎನಿಂದ ತನಿಖೆಯಾಗಬೇಕು. ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಗಳ ನಿಷೇಧವಾಗಬೇಕು. ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಂಸದೆ ಶೋಭಾ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.