ADVERTISEMENT

ವರ್ಗಾವಣೆ ದಂಧೆ: ‘ಪ್ರಜಾವಾಣಿ’ ವರದಿಗೆ ಸಿದ್ದರಾಮಯ್ಯ ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 14:15 IST
Last Updated 19 ಮಾರ್ಚ್ 2022, 14:15 IST
   

ಉಡುಪಿ: ಹೋಟೆಲ್‌ಗಳಲ್ಲಿ ತಿಂಡಿಗಳಿಗೆ ದರ ನಿಗದಿ ಮಾಡಿದಂತೆ ಅಧಿಕಾರಿಗಳ ವರ್ಗಾವಣೆಗೆ ಇಂತಿಷ್ಟು ಎಂದು ಸರ್ಕಾರ ದರ ನಿಗದಿ ಮಾಡಿರುವುದನ್ನು ‘ಪ್ರಜಾವಾಣಿ’ ಪತ್ರಿಕೆ ಸವಿಸ್ತಾರವಾಗಿ ವರದಿ ಮಾಡಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶ್ಲಾಘಿಸಿದರು.

ಶನಿವಾರ ಹಿರಿಯಡ್ಕದಲ್ಲಿ ಭೂ ಸುಧಾರಣಾ ಕಾಯ್ದೆ ಸುವರ್ಣ ಸಂಭ್ರಮ ಸಮಾವೇಶದಲ್ಲಿ ಮಾತನಾಡಿದ ಅವರು, ’ಅಧಿಕಾರಿಗಳ ವರ್ಗಾವಣೆಗೆ ದರ ನಿಗದಿಮಾಡಿರುವ ಸರ್ಕಾರಕ್ಕೆ ನಾಚಿಕೆಯಾಗಬೇಕು. ಭ್ರಷ್ಟಾಚಾರಕ್ಕೆ ಆಸ್ಪದ ಕೊಡುತ್ತಿರುವ ಇಂತಹ ಸರ್ಕಾರ ಅಗತ್ಯವಿದೆಯೇ‘ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್ ಕಮಿಷನ್ ಕೇಳಲಾಗುತ್ತಿದೆ ಎಂದು ರಾಜ್ಯ ಕಂಟ್ರಾಕ್ಟರ್ ಅಸೋಸಿಯೇಷನ್‌ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ನಾ ಖಾವೂಂಗ, ನಾ ಖಾನೆದೂಂಗ ಎಂದು ಹೇಳುವ ಚೌಕಿದಾರ್‌ ಇದುವರೆಗೂ ಭ್ರಷ್ಟಾಚಾರಿಗಳ ವಿರುದ್ಧ ಕ್ರಮ ಜರುಗಿಸಿಲ್ಲ ಎಂದು ಟೀಕಿಸಿದರು.

ADVERTISEMENT

ಮನಮೋಹನ್ ಸಿಂಗ್ ಅಧಿಕಾರಾವಧಿಯ ಕೊನೆಯಲ್ಲಿ ದೇಶದ ಸಾಲ 53.11 ಲಕ್ಷ ಕೋಟಿಇತ್ತು. 2022ರಲ್ಲಿ 152 ಲಕ್ಷ ಕೋಟಿಗೆಏರಿಕೆಯಾಗಿದೆ. ದೇಶ ಉದ್ಧಾರ ಮಾಡುವುದಾಗಿ ಬಂದ ಮೋದಿ 8 ವರ್ಷಗಳಲ್ಲಿ ₹ 100 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.