ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಉಡುಪಿ: ಸರ್ಕಾರಿ ಉದ್ಯೋಗ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಕೊರಗ ಸಮುದಾಯದವರಿಗೆ ನೇರ ನೇಮಕಾತಿ ಮೂಲಕ ಉದ್ಯೋಗ ನೀಡಲು ಕಾನೂನು ತೊಡಕುಗಳಿವೆ. ಆದ್ದರಿಂದ ಹೊರಗುತ್ತಿಗೆ ಕೆಲಸ ಎಲ್ಲೆಲ್ಲಿ ಖಾಲಿ ಇದೆ ಎಂಬುದನ್ನು ನೋಡಿಕೊಂಡು, ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಖಾದರ್ ಅವರು ಭರವಸೆ ನೀಡಿದರು.
ಕೊರಗ ಸಮುದಾಯದವರನ್ನು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡುವ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡಾ ಅವರು ತಮ್ಮ ಸಮುದಾಯದವರು ಎದುರಿಸುತ್ತಿರುವ ಸಮಸ್ಯೆಗಳನ್ನು ಸ್ಪೀಕರ್ ಮುಂದೆ ತೆರೆದಿಟ್ಟರು.
ಉದ್ಯೋಗ ದೊರಕಿಸುವ ಬಗ್ಗೆ ಪ್ರಯತ್ನಿಸುವುದಾಗಿ ಯು.ಟಿ. ಖಾದರ್ ಅವರು ಭರವಸೆ ನೀಡಿದ್ದಾರೆ. ಈ ಬಗ್ಗೆ ಚರ್ಚಿಸಿ, ಧರಣಿ ಕೈಬಿಡುವ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಸುಶೀಲಾ ನಾಡ ತಿಳಿಸಿದರು.
ಕೊರಗ ಸಮುದಾಯದವರು ನಡೆಸುತ್ತಿರುವ ಧರಣಿ ಬುಧವಾರ 10ನೇ ದಿನಕ್ಕೆ ಕಾಲಿರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.