ಪಡುಬಿದ್ರಿ: ‘ವಾಣಿಜ್ಯ ಬ್ಯಾಂಕ್‌ಗಳನ್ನು ನಾಚಿಸುವಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಸ್ಥೆಗಳು ಪ್ರಾಬಲ್ಯ ಹೊಂದಿವೆ. ಖಾಸಗಿ ಬ್ಯಾಂಕ್‌ಗಳಿಗಿಂತ ಸಹಕಾರಿ ಸಂಸ್ಥೆಗಳು ಜನರಿಗೆ ಸರಳೀಕೃತವಾಗಿ ಸಾಲ ನೀಡುವ ವ್ಯವಸ್ಥೆಯಿರುವ ಸಂಸ್ಥೆ ಸಹಕಾರಿ ಸಂಸ್ಥೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ಇಲ್ಲಿನ ಬಂಟರ ಸಂಘ, ಬಂಟ್ಸ್ ವೆಲ್‌ಫೇರ್ ಟ್ರಸ್ಟ್, ಸಿರಿಮುಡಿ ದತ್ತಿನಿಧಿ ಸೋಷಿಯಲ್ ವೆಲ್‌ಫೇರ್ ಟ್ರಸ್ಟ್ ಸಹಭಾಗಿತ್ವದಲ್ಲಿ ಸದಾನಂದ ಕುಡ್ಡು ಶೆಟ್ಟಿ ಹವಾನಿಯಂತ್ರಿತ ಸ್ವಂತ ಕಟ್ಟಡದಲ್ಲಿ ಆರಂಭಿಸಿರುವ ಸಿರಿಮುಡಿ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಿರಿಮುಡಿ ದತ್ತಿನಿಧಿ ಕಾರ್ಯಕ್ರಮ ಉದ್ಘಾಟಿಸಿ ಪಡುಬಿದ್ರಿ ಬಂಟರ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿದ ಎಂ.ಆರ್.ಜಿ. ಗ್ರೂಪ್ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಬಂಟರ ಸಂಘದ ಮುಖಂಡರೆನ್ನು ಸಂಪರ್ಕಿಸಿ ಮುಂದಿನ 3 ವರ್ಷದಲ್ಲಿ ಬ್ಯಾಂಕ್‌ನ ಠೇವಣಿಯನ್ನು ₹131 ಕೋಟಿಗೆ ಏರಿಸುವ ಪ್ರಯತ್ನ ಸಂಘದ ಅಧ್ಯಕ್ಷರಿಂದಾಗಲಿ. ನಾನು ಕೈ ಜೋಡಿಸುತ್ತೇನೆ. ವಿಜಯ ಬ್ಯಾಂಕ್ ಸ್ಥಾಪಕರಾದ ಮೂಲ್ಕಿ ಸುಂದರಾಮ್ ಶೆಟ್ಟಿ ಹೆಸರಿನಲ್ಲಿ ಆರಂಭಿಸಿರುವ ಟ್ರಸ್ಟ್ ಚೇರ್‌ಮೆನ್ ಆಗಿದ್ದು, ಮೂಲ್ಕಿಯಲ್ಲಿ ಅವರ ಸ್ಮಾರಕ ಭವನದಲ್ಲಿ ಸಂಗ್ರಹವಾಗುವ ಮೊತ್ತದಲ್ಲಿ ಮುಂದಿನ ದಿನಗಳಲ್ಲಿ ಕಾಪು, ಪಡುಬಿದ್ರಿ, ಮೂಲ್ಕಿ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸಹಾಯ ನೀಡುವ ಯೋಜನೆ ಬಗ್ಗೆ ಟ್ರಸ್ಟ್‌ನ ಇತರರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಪುಣೆ ಉದ್ಯಮಿ ಕಲಾಯಿಬೆಟ್ಟು ಶಂಕರಿ ನಿವಾಸದ ಸದಾನಂದ ಕೆ. ಶೆಟ್ಟಿ ಅವರು ಸದಾನಂದ ಕುಡ್ಡು ಶೆಟ್ಟಿ ಸಂಕೀರ್ಣ ಉದ್ಘಾಟಿಸಿದರು. ವಿವಿಧ ಫಲಾನುಭವಿಗಳಿಗೆ ಆರ್ಥಿಕ ಸಹಾಯ ವಿತರಿಸಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಹೇರಂಭಾ ಗ್ರೂಪ್ ಆಡಳಿತ ನಿರ್ದೇಶಕ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಿರಿಮುಡಿ ಉಳಿತಾಯ ಖಾತೆ ಪಾಸ್ ಪುಸ್ತಕ ವಿತರಿಸಿದರು. ವಿ.ಕೆ.ಗ್ರೂಪ್ ಆಡಳಿತ ನಿರ್ದೇಶಕ ಕೆ.ಎಂ.ಶೆಟ್ಟಿ ನಿರಖು ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಅಧ್ಯಕ್ಷತೆ ವಹಿಸಿದ್ದರು.
ಬಂಟ್ಸ್ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಡಾ.ವೈ.ಎನ್.ಶೆಟ್ಟಿ, ಕೋಶಾಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಬಂಟರ ಸಂಘ ಮಹಿಳಾ ವಿಭಾಗದ ಅಧ್ಯಕ್ಷೆ ಭಾರತಿ ಬಿ. ಶೆಟ್ಟಿ, ಯುವ ಬಂಟರ ವಿಭಾಗದ ಅಧ್ಯಕ್ಷ ಸುಜಿತ್ ಶೆಟ್ಟಿ, ಸಿರಿಮುಡಿ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಶ್ರೀನಾಥ್ ಹೆಗ್ಡೆ, ನಿರ್ದೇಶಕರಾದ ವೈ. ಶಶಿಧರ್ ಶೆಟ್ಟಿ, ರವೀಂದ್ರನಾಥ ಜಿ. ಹೆಗ್ಡೆ, ಸುರೇಶ್ ಶೆಟ್ಟಿ ಗುಂಡ್ಲಾಡಿ, ನವೀನ್‌ಚಂದ್ರ ಜೆ. ಶೆಟ್ಟಿ, ಸಂತೋಷ್ ಶೆಟ್ಟಿ ಪಲ್ಲವಿ, ಮಾಧವ ಸಿ. ಶೆಟ್ಟಿ, ಶೋಭಾ ಜೆ. ಶೆಟ್ಟಿ ಭಾಗವಹಿಸಿದ್ದರು. ಬಂಟರ ಸಂಘದ ಸಿರಿಮುಡಿ ದತ್ತಿನಿಧಿ ಸ್ಥಾಪಕ ಸಾಂತೂರು ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಜಯ ಶೆಟ್ಟಿ ಪದ್ರ, ವಿತಾ ಹರೀಶ್ ಶೆಟ್ಟಿ ನಿರ್ವಹಿಸಿದರು. ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ವಂದಿಸಿದರು.
₹17 ಲಕ್ಷದ ಸಹಾಯಧನ, ವಿದ್ಯಾರ್ಥಿವೇತನ ವಿತರಣೆ
ಅಶಕ್ತರಿಗೆ, ಅಂಗವಿಕಲರಿಗೆ, ಅನಾರೋಗ್ಯ ಪೀಡಿತರಿಗೆ, ವಿಧವೆಯರಿಗೆ, ಮನೆ ನಿರ್ಮಾಣಕ್ಕೆ ಸಹಾಯಧನ ವಿತರಿಸಲಾಯಿತು. ಸಿರಿಮುಡಿ ದತ್ತಿನಿಧಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೇರಿ ₹17 ಲಕ್ಷ ಸಹಾಯಧನ ವಿತರಿಸಲಾಯಿತು. ಪಡುಬಿದ್ರಿ ಬಂಟರ ಸಂಘದ ವತಿಯಿಂದ 2026ರ ಜನವರಿ 18ರಂದು ನಡೆಯಲಿರುವ ರಾಷ್ಟ್ರೀಯ ಬಂಟ ಕಲೋತ್ಸವ ‘ತುಳುವ ಐಸಿರಿ 2026’ರ ಕರಪತ್ರವನ್ನು ಎಂ.ಎನ್. ರಾಜೇಂದ್ರ ಕುಮಾರ್ ಬಿಡುಗಡೆಗೊಳಿಸಿದರು. ಸನ್ಮಾನ: ಎಂ.ಎನ್. ರಾಜೇಂದ್ರ ಕುಮಾರ್, ಪುಣೆ ಉದ್ಯಮಿ ಸದಾನಂದ ಕೆ. ಶೆಟ್ಟಿ ಅವರನ್ನು ಪಡುಬಿದ್ರಿ ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬಂಟಾಶ್ರಯ ಯೋಜನೆಗೆ ₹5 ಲಕ್ಷ ದೇಣಿಗೆ ನೀಡಿದ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ದಂಪತಿಯನ್ನು ಗೌರವಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.