ADVERTISEMENT

ಎಂಜಿಎಂ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ

​ಪ್ರಜಾವಾಣಿ ವಾರ್ತೆ
Published 29 ಮೇ 2023, 13:47 IST
Last Updated 29 ಮೇ 2023, 13:47 IST
ಉಡುಪಿ ಮಹಾತ್ಮ ಗಾಂಧಿ ಸ್ಮಾರಕ ಕಾಲೇಜಿನ 1992ನೇ ವರ್ಷದ ಕಲಾ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಈಚೆಗೆ ಜರುಗಿತು.
ಉಡುಪಿ ಮಹಾತ್ಮ ಗಾಂಧಿ ಸ್ಮಾರಕ ಕಾಲೇಜಿನ 1992ನೇ ವರ್ಷದ ಕಲಾ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಈಚೆಗೆ ಜರುಗಿತು.   

ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಕಾಲೇಜಿನ 1992ನೇ ವರ್ಷದ ಕಲಾ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಈಚೆಗೆ ಜರುಗಿತು.

ನಿವೃತ್ತ ಹಿರಿಯ ಆಂಗ್ಲ ಪ್ರಾಧ್ಯಾಪಕರಾದ ಪ್ರೊ.ಎನ್.ಟಿ.ಭಟ್ಟರು ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮಿನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು.

ನಿವೃತ್ತ ಪ್ರಾಂಶುಪಾಲ ಪ್ರೊ.ಸ್ಯಾಮ್ ಡೇನಿಯಲ್‌, ನಿವೃತ್ತ ಆಂಗ್ಲ ಭಾಷಾ ಪ್ರಾಧ್ಯಾಪಕಿ ಪ್ರೊ.ಪುಷ್ಪಲತಾ ಸಾಂತ್ಯಾರ, ನಿವೃತ್ತ ಪ್ರಾಂಶುಪಾಲೆ ಪ್ರೊ. ಸಂಧ್ಯಾ ನಂಬಿಯಾರ್, ನಿವೃತ್ತ ಹಿಂದಿ ಪ್ರಾಧ್ಯಾಪಕ ಡಾ.ಎಸ್.ಆರ್.ಶೇಟ್, ನಿವೃತ್ತ ಗ್ರಂಥಪಾಲಕ ಎಸ್.ಬಾಲು, ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ  ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಪ್ರೊ.ರೇೂಹಿತ್ ಅಮೀನ್, ದೈಹಿಕ ನಿದೇ೯ಶಕಿ ಜಯಶ್ರೀ ನಾಯಕ್, ನಿವೃತ್ತ ಹಿಂದಿ ಪ್ರಾಧ್ಯಾಪಕಿ ಇಂದುಮತಿ, ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ಚೆನ್ನಪೂಜಾರಿ, ಗೃಹವಿಜ್ಞಾನ ಪ್ರಾಧ್ಯಾಪಕಿ ಪೂರ್ಣಿಮಾ ಅಡಿಗ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.

ADVERTISEMENT

ಎಂಜಿಎಂ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಮಾಲತಿದೇವಿ, ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕಿ ಡಾ. ಮಲ್ಲಿಕಾ ಶೆಟ್ಟಿ ಇದ್ದರು. ಹಳೆ ವಿದ್ಯಾರ್ಥಿ ವಿಶ್ವನಾಥ್ ಶ್ಯಾನುಭಾಗ್ ಗಾಯತ್ರಿ ಕಾರ್ಯಕ್ರಮ ಸಂಯೇೂಜಿಸಿದರು. ಡಾ. ಅರ್ಚನಾ ಕಾರ್ಯಕ್ರಮ ನಿರೂಪಿಸಿದರು. ನಂತರ ಮನೇೂರಂಜನಾ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.