ADVERTISEMENT

ಬೈಂದೂರು: ಸಾಮಾಜಿಕ ಹೋರಾಟಗಾರ ಸಾಯಿದತ್ತ ಭಟ್ ನಿಧನ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 6:16 IST
Last Updated 5 ಫೆಬ್ರುವರಿ 2023, 6:16 IST
ಸಾಯಿದತ್ತ ಭಟ್
ಸಾಯಿದತ್ತ ಭಟ್   

ಬೈಂದೂರು (ಉಡುಪಿ ಜಿಲ್ಲೆ): ಬೆಂಗಳೂರನ್ನು ಫ್ಲೆಕ್ಸ್ ಮುಕ್ತ ನಗರಿಯನ್ನಾಗಿಸಲು ಪ್ರಯತ್ನಿಸಿದ್ದ ಹಾಗೂ ಕಾನೂನು ಹೋರಾಟದ ಮೂಲಕ ಬಿ‌ಡಿಎಗೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಉಳಿಸಿಕೊಟ್ಟ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಭಟ್ ಬೈಂದೂರು ಹೃದಯಾಘಾತದಿಂದ ಶನಿವಾರ ನಿಧನರಾದರು.

ಕ್ರಿಕೆಟ್ ಆಟಗಾರರಾಗಿದ್ದ ಸಾಯಿದತ್ತ ಭಟ್‌, ಇಲ್ಲಿನ ವಿಕ್ರಮ್ ಸ್ಪೋರ್ಟ್ಸ್ ಕ್ಲಬ್ ತಂಡದಲ್ಲಿ ಆಲ್‌ರೌಂಡ್ ಆಟದ ಮೂಲಕ 80ರ ದಶಕದಲ್ಲಿ ಮಿಂಚಿದ್ದರು. ವೀಕ್ಷಕ ವಿವರಣೆಕಾರರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ವಿಕ್ರಮ್ ಸ್ಪೋರ್ಟ್ಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ, ಲಾವಣ್ಯ ಕಲಾವೃಂದದ ಪೋಷಕ, ಬೈಂದೂರು ಜೇಸಿ ಅಧ್ಯಕ್ಷರೂ ಆಗಿದ್ದರು.

ಜಮೀನಿಗೆ ಸಂಬಂಧಿಸಿದ ದೂರುಗಳ ವಿಚಾರಣೆ ಮಾಡಲು ಮತ್ತು ಬಿಡಿಎ ಆಸ್ತಿಗಳ ಬಗ್ಗೆ ತನಿಖೆ ನಡೆಸಲು ಯಶಸ್ವಿ ಹೋರಾಟ ಮಾಡಿದ್ದ ಅವರು ವಿವಾದಿತ, ಸ್ವಯಂಘೋಷಿತ ದೇವಮಾನವ ಆಸಾರಾಂ ಬಾಪು ಆಶ್ರಮದ ವಿರುದ್ಧ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿ, ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಬಿಡಿಎಗೆ ಉಳಿಸಿಕೊಟ್ಟಿದ್ದರು. ಬಿಬಿಎಂಪಿಯ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.