ADVERTISEMENT

ಕೇರಳ ಕರ್ನಾಟಕ ಗಡಿಗೆ ಎಸ್‌ಪಿ ಭೇಟಿ

ಕೇರಳದಿಂದ ಜನರು ರಾಜ್ಯದ ಗಡಿ ಪ್ರವೇಶಿಸದಂತೆ ಎಚ್ಚರವಹಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2020, 16:14 IST
Last Updated 7 ಏಪ್ರಿಲ್ 2020, 16:14 IST
ಕರಾವಳಿ ಕಾವಲು ಪಡೆಯ ಎಸ್‌ಪಿ ಆರ್‌.ಚೇತನ್‌ ಮಂಗಳವಾರ ಕರ್ನಾಟಕ ಹಾಗೂ ಕೇರಳ ಗಡಿ ಪಾಯಿಂಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರಾವಳಿ ಕಾವಲು ಪಡೆಯ ಎಸ್‌ಪಿ ಆರ್‌.ಚೇತನ್‌ ಮಂಗಳವಾರ ಕರ್ನಾಟಕ ಹಾಗೂ ಕೇರಳ ಗಡಿ ಪಾಯಿಂಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   

ಉಡುಪಿ: ಕೋವಿಡ್‌ ಸೋಂಕಿತರ ಪ್ರಮಾಣ ಹೆಚ್ಚಿರುವ ಕೇರಳದಿಂದ ಸಮುದ್ರ ಮಾರ್ಗವಾಗಿ ಜನರು ಬರುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಕರಾವಳಿ ಕಾವಲು ಪಡೆಯ ಎಸ್‌ಪಿ ಆರ್‌.ಚೇತನ್‌ ಮಂಗಳವಾರ ಕರ್ನಾಟಕ ಹಾಗೂ ಕೇರಳ ಗಡಿ ಪಾಯಿಂಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಿನದ 24 ಗಂಟೆ ಕರಾವಳಿ ಕಾವಲುಪಡೆಯ ಸಿಬ್ಬಂದಿ ಇಂಟರ್‌ಸೆಪ್ಟರ್ ಬೋಟ್‌ ಮೂಲಕ ಗಸ್ತು ತಿರುಗಬೇಕು. ಕೇರಳ ರಾಜ್ಯದಿಂದ ಕರ್ನಾಟಕಕ್ಕೆ ಯಾರೂ ಬರದಂತೆ ಎಚ್ಚರವಹಿಸಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT