ADVERTISEMENT

ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2022, 14:24 IST
Last Updated 10 ಸೆಪ್ಟೆಂಬರ್ 2022, 14:24 IST
ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಎಸ್‌ಡಿಎಂಸಿಯಿಂದ ಆಚರಿಸಲಾಯಿತು.
ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಎಸ್‌ಡಿಎಂಸಿಯಿಂದ ಆಚರಿಸಲಾಯಿತು.   

ಉಡುಪಿ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಎಸ್‌ಡಿಎಂಸಿಯಿಂದ ಆಚರಿಸಲಾಯಿತು.

ಶಿಕ್ಷ ಪ್ರಭಾ ಅಕಾಡೆಮಿಯ ನಿರ್ದೇಶಕ ಪ್ರತಾಪ್ ಶೆಟ್ಟಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿಶೇಷ ಮಕ್ಕಳ ಸೇವೆಯಲ್ಲಿ ತೊಡಗಿರುವ ಶಿಕ್ಷಕಿಯರ ಸೇವೆಯು ಎಲ್ಲ ಸೇವೆಗಳಿಗಿಂತ ಮಿಗಿಲಾದುದು. ತಾಳ್ಮೆ ಇದ್ದರೆ ಮಾತ್ರ ಉತ್ತಮ ಶಿಕ್ಷಕರಾಗಲು ಸಾಧ್ಯ ಎಂದರು.

ವಿಶೇಷ ಶಿಕ್ಷಕರ ತಾಳ್ಮೆ, ಸಹನೆ ನಿಜಕ್ಕೂ ಅಭಿನಂದನೀಯ ಎಂದು ಶಿಕ್ಷಕರ ದಿನಾಚರಣೆಯ ಶುಭಾಶಯ ಹೇಳಿ ಹಾರೈಸಿದರು.

ADVERTISEMENT

ಕಸ್ಟಮ್ಸ್ ಮತ್ತು ಜಿಎಸ್‌ಟಿ ಇಲಾಖೆಯ ನಿವೃತ್ತ ಸಹಾಯಕ ಕಮಿಷನರ್ ಪ್ರಭಾತ್ ಶೆಟ್ಟಿ ಮಾತನಾಡಿ, ದೇಶ ಕಟ್ಟಲು ಶಿಕ್ಷಕರ ಕೂಡುಗೆ ಎಲ್ಲರಿಗೂ ಸ್ಫೂರ್ತಿ. ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದರು.

ನಿವೃತ್ತ ಶಿಕ್ಷಕರಾದ ಶ್ರೀಧರ ಶೆಟ್ಟಿ, ಪ್ರೇಮಾನಂದ, ಮುಖಂಡರಾದ ಜಾನ್ ಮೆಂಡೋನ್ಸಾ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ವಿನಯ್ ಕುಮಾರ್ ಇದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಗೌರವಿಸಲಾಯಿತು. ಶಿಕ್ಷಕರ ದಿನಾಚರಣೆ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆದು ಬಹುಮಾನಗಳನ್ನು ವಿತರಿಸಲಾಯಿತು. ಪೋಷಕರಾದ ಜಯಲಕ್ಷ್ಮಿ ಸ್ವಾಗತಿಸಿದರು, ಆಶಾ ವಂದಿಸಿದರು. ಶುಭಾ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.