ADVERTISEMENT

ಸಮಾಜಮುಖಿ ಒಲವು ಬೆಳೆಸಿಕೊಳ್ಳಲು ಸಲಹೆ

ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ವಲಯ ಮಟ್ಟದ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2025, 5:18 IST
Last Updated 28 ಅಕ್ಟೋಬರ್ 2025, 5:18 IST
ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು
ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು   

ಉಡುಪಿ: ಸಮಾಜಮುಖಿ ಒಲವು ಬೆಳೆಸಿಕೊಂಡಾಗ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಉಡುಪಿ ವಲಯ ಹಾಗೂ ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಮಂಗಳೂರು ಅಧೀನ ಸಂಸ್ಥೆಯಾದ ಮೂಳೂರು ಅಲ್ ಇಹ್ಸಾನ್ ಇಂಗ್ಲಿಷ್‌ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿರು.

ನಮ್ಮ ನಡುವಿನ ಮೇಲು–ಕೀಳು, ಜಾತಿ– ಧರ್ಮ ಎಲ್ಲವನ್ನೂ ಮೀರಿ ನಿಲ್ಲುವಲ್ಲಿ ಕಲೆ ಮತ್ತು ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ ಎಂದೂ ಅವರು ಹೇಳಿದರು.

ADVERTISEMENT

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಪಥ ಸಂಚಲನದ ಧ್ವಜ ವಂದನೆ ಸ್ವೀಕರಿಸಿ, ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಉದ್ಯಮಿ ಸಾಧು ಸಾಲ್ಯಾನ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಯಲ್ಲಮ್ಮ ಕ್ರೀಡಾಜ್ಯೋತಿ ಹಸ್ತಾಂತರಿಸಿದರು.

ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ, ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖ್ ವಹೀದ್ ದಾವೂದ್, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ತಾಲ್ಲೂಕು ಘಟಕ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಉದ್ಯಮಿ ಮುಹಮ್ಮದ್ ಇಬ್ರಾಹಿಂ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಮುಖ್ಯ ಅತಿಥಿಗಳಾಗಿದ್ದರು.

ಕ್ರೀಡಾಕೂಟ ಸಂಘಟನಾ ಸಮಿತಿಯ ಅಧ್ಯಕ್ಷ ಶಬೀ ಅಹ್ಮದ್ ಖಾಝಿ, ಕೋಶಾಧಿಕಾರಿ ಹಾಜಿ ಅಬೂಬಕ್ಕರ್ ನೇಜಾರು, ಸಂಚಾಲಕ ಮುಸ್ತಾಕ್ ಸಾಹೇಬ್ ಕಾಪು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್, ಅನ್ವರ್ ಹುಸೇನ್ ಗೂಡಿನಬಳಿ, ಮೌಲಾನ ಯು.ಕೆ.ಮುಸ್ತಫಾ ಸಅದಿ, ಯುಸೂಫ್, ಸೈಯದ್ ಶಬಾನ ಭಾಗವಹಿಸಿದ್ದರು.

ಅಲ್ ಇಹ್ಸಾನ್ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಹಬೀಬರ‍್ರಹ್ಮಾನ್ ಕೆ.ಎಸ್. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಶೀರ್ ಎಂ. ವಂದಿಸಿದರು. ಸತೀಶ್ ಶೆಟ್ಟಿ  ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.