ADVERTISEMENT

‘ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸಿ’

ಸಾಲಿಗ್ರಾಮ ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 4:07 IST
Last Updated 29 ಅಕ್ಟೋಬರ್ 2025, 4:07 IST
ಕ್ರೀಡಾಕೂಟವನ್ನು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್‌ ಉದ್ಘಾಟಿಸಿದರು 
ಕ್ರೀಡಾಕೂಟವನ್ನು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್‌ ಉದ್ಘಾಟಿಸಿದರು    

ಬ್ರಹ್ಮಾವರ: ಯುವ ಸಮುದಾಯ ಹೆಚ್ಚು ಕ್ರೀಡಾಸಕ್ತಿ ಹೊಂದಬೇಕು. ಈ ಮೂಲಕ ಸಾಧನೆಯ ಶಿಖರ ಏರಲು ಸಾಧ್ಯ ಎಂದು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ಹೇಳಿದರು.

ಸಾಲಿಗ್ರಾಮದ ಹಳೆಕೋಟೆ ಮೈದಾನದಲ್ಲಿ ಸೋಮವಾರ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯಿತಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ 14ರ ವಯೋಮಿತಿಯ ಬಾಲಕ ಬಾಲಕಿಯರ ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ ಮುಕುಟ 2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದು ಮೊಬೈಲ್‌ನಿಂದಾಗಿ ಯುವ ಜನರಲ್ಲಿ ಕ್ರೀಡಾಸಕ್ತಿ ಕುಂಠಿತಗೊಳ್ಳುತ್ತಿದ್ದು ಈ ಬಗ್ಗೆ ಯುವಕರು ಭಾಗಿಯಾಗುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಮುನ್ನುಡಿ ಬರೆಯಲು ಸಾಧ್ಯ. ಕ್ರೀಡೆಯಲ್ಲಿ ಗೆಲ್ಲುವ ಹುಮ್ಮಸ್ಸಿಗಿಂತ ಭಾಗವಹಿಸುವುದು ಬಹುಮುಖ್ಯ. ಸೋಲು ಗೆಲುವು ಪ್ರತಿ ವ್ಯವಸ್ಥೆಯಲ್ಲಿ ಸಹಜ. ಆದರೆ ಸಮನಾಗಿ ಸ್ವೀಕರಿಸಿ ಮುನ್ನಡೆದರೆ ಕ್ರೀಡಾ ಸಾರ್ಥಕ್ಯಕ್ಕೆ ಕೈಗನ್ನಡಿಯಾಗಲಿದೆ ಎಂದು ಹೇಳಿದರು.

ADVERTISEMENT

ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಅಧ್ಯಕ್ಷತೆ ವಹಿಸಿದ್ದರು. ಕೋಟದ ಸಬ್‌ ಇನ್ಸ್‌ಪೆಕ್ಟರ್‌ ಗೋಪಾಲ ಪೂಜಾರಿ ಕ್ರೀಡಾ ಜ್ಯೋತಿ ಬೆಳಗಿದರು.

ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಕ್ರೀಡಾ ಧ್ವಜಾರೋಹಣ ಮಾಡಿದರು.
ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಪರಿವೀಕ್ಷಕ ನಿತ್ಯಾನಂದ ಶೆಟ್ಟಿ,ಉದ್ಯಮಿ ಅಜೇಯ್ ಶ್ಯಾನುಭಾಗ್, ಗಣಪತಿ ಶ್ಯಾನುಭಾಗ್, ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸಾಧು ಸೇರಿಗಾರ್, ಪಟ್ಟಣಪಂಚಾಯಿತಿ ಸದಸ್ಯೆ ರತ್ನ ನಾಗರಾಜ ಗಾಣಿಗ, ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ದಿನೇಶ ಕಾರ್ಕಡ, ಸಿಆರ್ ಪಿ ಸವಿತಾ ಆಚಾರ್, ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಶಾಲಾ ಹಳೇವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮುರುಳೀಧರ ನಾಯರಿ, ಸದಸ್ಯರಾದ ಕೃಷ್ಣಪ್ರಸಾದ್ ಹೇರ್ಳೆ, ಬ್ರಹ್ಮಾವರ ವಲಯ ಶಿಕ್ಷಣ ಇಲಾಖೆಯ ಸಂಯೋಜಕ ಪ್ರಕಾಶ್ ಬಿ.ಬಿ ಇದ್ದರು.

ಮುಖ್ಯ ಶಿಕ್ಷಕಿ ಜ್ಯೋತಿ ಸ್ವಾಗತಿಸಿದರು. ಸಹಶಿಕ್ಷಕಿ ಬೇಬಿ ವಂದಿಸಿದರು. ಹಂಗಾರಕಟ್ಟೆ ಶಾಲೆಯ ದೈಹಿಕ ಶಿಕ್ಷಕ ಶ್ರೀಕಾಂತ ಸಾವಂತ್ ನಿರೂಪಿಸಿದರು.