ADVERTISEMENT

ಕಾರ್ಕಳ | ‘ಶಿಸ್ತು, ಸಂಯಮ ಕಲಿಸುವ ಕ್ರೀಡೆ’

ಕ್ರೈಸ್ಟ್ ಕಿಂಗ್ ಕ್ರೀಡಾಕೂಟದಲ್ಲಿ ಗೌರವ ವಂದನೆ ಸ್ವೀಕರಿಸಿದ ಎಎಸ್‌ಐ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 5:57 IST
Last Updated 2 ಡಿಸೆಂಬರ್ 2025, 5:57 IST
ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಕಾರ್ಕಳದ ಝಕ್ರಿಯಾ ಕ್ರೀಡಾಜ್ಯೋತಿ ಬೆಳಗಿಸಿದರು
ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಕಾರ್ಕಳದ ಝಕ್ರಿಯಾ ಕ್ರೀಡಾಜ್ಯೋತಿ ಬೆಳಗಿಸಿದರು   

ಕಾರ್ಕಳ: ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ಶಿಸ್ತು, ಸಂಯಮದಿಂದ ಜೀವನ ನಡೆಸಲು ಕ್ರೀಡೆ ಸಹಾಯ ಮಾಡುತ್ತದೆ. ಬಾಲ್ಯದಿಂದಲೇ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಸಂಸ್ಕಾರಯುತ ಜೀವನ ನಡೆಸಬೇಕು ಎಂದು ನಗರ ಠಾಣೆಯ ಎಎಸ್ಐ ಶೇಖರ್ ನಾಯ್ಕ್ ಹೇಳಿದರು.

ಇಲ್ಲಿನ ಗಾಂಧಿ ಮೈದಾನದಲ್ಲಿ ಈಚೆಗೆ ನಡೆದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಯುವಜನ ಸೇವಾ ಅಧಿಕಾರಿ, ಹಿರ್ಗಾನ ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಕ್ರೀಡೆ ಸಹಾಯ ಮಾಡುತ್ತದೆ. ಎಲ್ಲರೂ ಉತ್ಸಾಹದಿಂದ ಕ್ರೀಡಾಹಬ್ಬದಲ್ಲಿ ಭಾಗವಹಿಸಬೇಕು ಎಂದರು.

ADVERTISEMENT

ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಕಾರ್ಕಳದ ಝಕ್ರಿಯಾ ಎಂ. ಕ್ರೀಡಾಜ್ಯೋತಿ ಬೆಳಗಿಸಿದರು. ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಸಮಾಲೋಚಕಿ ಸಿಸ್ಟರ್ ಡಾ.ಶಾಲೆಟ್ ಸಿಕ್ವೆರಾ ಕ್ರೀಡಾಳುಗಳನ್ನು ಪರಿಚಯಿಸಿದರು. ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಅವೆಲಿನ್ ಲೂಯಿಸ್‌ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಂದ ಆಕರ್ಷಕ ಕ್ರೀಡಾ ಪಥ ಸಂಚಲನ, ಕ್ರೀಡಾಜ್ಯೋತಿ ಮೆರವಣಿಗೆ ನಡೆಯಿತು.

ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಂಶುಪಾಲ ಲಕ್ಷ್ಮೀ ನಾರಾಯಣ ಕಾಮತ್, ಉಪ ಪ್ರಾಂಶುಪಾಲ ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಜ್ಯೋತ್ಸ್ನಾ, ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರುಡಾಲ್ಪ್ ಕಿಶೋರ್ ಲೋಬೊ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕಾಲೇಜು ವಿಭಾಗದ ದಯಾನಂದ, ಪ್ರೌಢಶಾಲಾ ವಿಭಾಗದ ಶೆರಿಟಾ ನೊರೋನ್ಹ, ಪ್ರಾಥಮಿಕ ವಿಭಾಗದ ಉದಯರವಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ಕೀರ್ತನ್ ಡಿಸೋಜ ಸ್ವಾಗತಿಸಿದರು. ಆಯಿಷಾ ರೂಬ ವಂದಿಸಿದರು. ಇಂಗ್ಲಿಷ್ ಉಪನ್ಯಾಸಕಿ ಪಾವನಾ ಧನ್ಯರಾಜ್ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಪ್ರಸಾದ್, ಪ್ರಕಾಶ್ ನಾಯ್ಕ್, ಲಾವಣ್ಯ ಕ್ರೀಡಾಕೂಟ ಸಂಘಟಿಸಿದ್ದರು.

ಪ್ರತಿ ವಿದ್ಯಾರ್ಥಿ ಕ್ರೀಡೆಯ ಮಹತ್ವ ಅರಿತುಕೊಂಡು ಬದುಕಿನಲ್ಲಿ ಅಳವಡಿಸಿಕೊಂಡು ಶಾಲೆ ದೇಶಕ್ಕೆ ಕೀರ್ತಿ ತರಬೇಕು ಝಕ್ರಿಯಾ

–ಎಂ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.