ಕುಂದಾಪುರ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತವೆ. ಶಿಸ್ತು, ನಾಯಕತ್ವ ಮತ್ತು ಸಮಯ ನಿರ್ವಹಣೆಯಂತಹ ಜೀವನ ಕೌಶಲಗಳನ್ನು ಬೆಳೆಸುತ್ತವೆ ಮತ್ತು ಸಾಮಾಜಿಕ ಕೌಶಲ್ಯ ಹೆಚ್ಚಿಸುತ್ತವೆ ಎಂದು ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಹೇಳಿದರು.
ತಾಲ್ಲೂಕಿನ ಚಿತ್ತೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಬೈಂದೂರು ವಲಯದ ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ಕೊಕ್ಕೊ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.
ಒತ್ತಡ ನಿವಾರಣೆ ಮತ್ತು ಖಿನ್ನತೆಯ ವಿರುದ್ಧ ಹೋರಾಡುವಲ್ಲಿ ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುತ್ತವೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಸಹಾಯ ಮಾಡುತ್ತವೆ ಎಂದರು.
ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾ ಚಂದ್ರಶೇಖರ ಶೆಟ್ಟಿ ಮಾತನಾಡಿ ಕ್ರೀಡೆಗಳು ಕ್ರೀಡಾಪಟುಗಳಿಗೆ ನಿಯಮಗಳನ್ನು ಪಾಲಿಸುವ ಮೂಲಕ ಶಿಸ್ತನ್ನು ಕಲಿಸುತ್ತವೆ. ಇಲ್ಲಿನ ಪಂದ್ಯಾಟದಲ್ಲಿ ವಿಜೇತರಾದ ತಂಡಗಳು ಮುಂದಿನ ದಿನಗಳಲ್ಲಿ ಆರ್ಡಿ ಹಲ್ಬಾಡಿಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟವನ್ನು ಪ್ರತಿನಿಧಿಸಲಿದ್ದಾರೆ ಎಂದರು.
ಚಿತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿರಾಜ್ ಶೆಟ್ಟಿ ಮಾತನಾಡಿ, ಕ್ರೀಡೆಯಲ್ಲಿನ ಭಾಗವಹಿಸುವಿಕೆ ಆತ್ಮ ವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಜೀವನದ ಸವಾಲುಗಳನ್ನು ಎದುರಿಸಲು ಸಹಾಯ ಮಾಡುತ್ತದೆ ಎಂದರು
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಜಯರಾಮ್ ಶೆಟ್ಟಿ ವಂಡಬಳ್ಳಿ, ಡಾ.ಅತುಲ್‌ಕುಮಾರ್ ಶೆಟ್ಟಿ. ತಾ.ಪಂ ಮಾಜಿ ಸದಸ್ಯ ಉದಯ ಜಿ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಸಿಆರ್‌ಪಿ ನಾಗರಾಜ್ ಶೆಟ್ಟಿ, ಪ್ರಮುಖರಾದ ಸುಗುಣ, ಚಂದ್ರಶೇಖರ ಶೆಟ್ಟಿ, ಅರುಣ್‌ಕುಮಾರ್ ಶೆಟ್ಟಿ, ಮಂಜುನಾಥ ಶೆಟ್ಟಿ, ರವಿಶಂಕರ್ ಹೆಗ್ಡೆ, ನಿರ್ಮಲ ಶೆಟ್ಟಿ, ಚಂದ್ರ ಶೆಟ್ಟಿ ಕೊಳೂರು, ಸುರೇಶ್ ಪೂಜಾರಿ ಚಿತ್ತೂರು, ಸುರೇಂದ್ರ ಶೆಟ್ಟಿ , ಹಳೆ ವಿದ್ಯಾರ್ಥಿಗಳು ಹಾಗೂ ಕ್ರೀಡಾಭಿಮಾನಿಗಳು ಇದ್ದರು.
ಪ್ರಭಾರ ಮುಖ್ಯ ಶಿಕ್ಷಕಿ ನಾಗರತ್ನ ಸ್ವಾಗತಿಸಿದರು ಶಿಕ್ಷಕಿ ಮೀನಾ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ಶೆಟ್ಟಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.