ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: 13,081 ವಿದ್ಯಾರ್ಥಿಗಳು ಹಾಜರು

803 ಮಕ್ಕಳು ಗೈರು, ಕಂಟೈನ್‌ಮೆಂಟ್‌ ಝೋನ್‌ನಿಂದ ಬಂದಿದ್ದ 9 ಮಂದಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 17:21 IST
Last Updated 27 ಜೂನ್ 2020, 17:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಜಿಲ್ಲೆಯಾದ್ಯಂತ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ವಿಷಯದಲ್ಲಿ 13,081 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದ 13,884 ವಿದ್ಯಾರ್ಥಿಗಳ ಪೈಕಿ 803 ಮಂದಿ ಗೈರಾಗಿದ್ದರು. ಹೊರ ಜಿಲ್ಲೆಗಳ ವಲಸೆ ಕಾರ್ಮಿಕರ 82 ಮಕ್ಕಳು ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದರು.

ಕಂಟೈನ್‌ಮೆಂಟ್‌ ಝೋನ್‌ಗಳಿಂದ 9 ಮಕ್ಕಳು ಹಾಗೂ ಅನಾರೋಗ್ಯದ ಲಕ್ಷಣಗಳಿದ್ದ ನಾಲ್ವರು ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆಗೆ ಬರೆದರು. ಪರೀಕ್ಷಾ ಅಕ್ರಮದಲ್ಲಿ ಯಾರೂ ಭಾಗಿಯಾಗಿಲ್ಲ, ಗೊಂದಲಗಳಿಲ್ಲದೆ ಪರೀಕ್ಷೆ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ಯಾನರ್ ಮೂಲಕ ಪರೀಕ್ಷಿಸಿ ಒಳಗೆ ಬಿಡಲಾಯಿತು. ಮಾಸ್ಕ್ ಧರಿಸಿ ಅಂತರ ಕಾಯ್ದುಕೊಂಡು ಮಕ್ಕಳು ಪರೀಕ್ಷೆ ಬರೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.