ADVERTISEMENT

ಉಡುಪಿ: ತಗ್ಗಿದ ಮಳೆ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 7:51 IST
Last Updated 19 ಜುಲೈ 2021, 7:51 IST
   

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಮಳೆ ಕೊಂಚ ತಗ್ಗಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬರಲು ಅನುಕೂಲವಾಯಿತು.

ಜಿಲ್ಲೆಯಲ್ಲಿ 13,931 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು 77ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಬೆಳಿಗ್ಗೆ ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡಲಾಯಿತು. ಸ್ಯಾನಿಟೈಸರ್ ಹಾಕಿ ಕೊಠಡಿಯ ಒಳಗೆ ಪ್ರವೇಶ ನೀಡಲಾಯಿತು.

ಮಳೆಯ ಕಾರಣದಿಂದ ಪರೀಕ್ಷೆ ಬರೆಯಲು ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಅಭಿಮತ ಸಂಸ್ಥೆ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆತರುವ ಕಾರ್ಯಕ್ಕೆ ಕೈಜೋಡಿಸಿತ್ತು.

ADVERTISEMENT

ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್, ಡಿಡಿಪಿಐ ಎನ್.ಎಚ್.ನಾಗೂರ ಹಲವು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.