ADVERTISEMENT

SSLC Result 2025: ಎರಡನೇ ಸ್ಥಾನಕ್ಕಿಳಿದ ಉಡುಪಿ

​ಪ್ರಜಾವಾಣಿ ವಾರ್ತೆ
Published 2 ಮೇ 2025, 8:50 IST
Last Updated 2 ಮೇ 2025, 8:50 IST
   

ಉಡುಪಿ: ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯ ಫಲಿತಾಂಶದಲ್ಲಿ ಕಳೆದ ಬಾರಿ ಮೊದಲ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆಯು ಈ ಬಾರಿ ದ್ವಿತೀಯ ಸ್ಥಾನಕ್ಕಿಳಿದಿದೆ.

ಜಿಲ್ಲೆಯಲ್ಲಿ ಒಟ್ಟು 13,579 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 12,215 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ 89.96ರಷ್ಟು ಫಲಿತಾಂಶ ಬಂದಿದೆ.

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸ್ವಸ್ತಿ ಕಾಮತ್‌ 625 ರಲ್ಲಿ 625 ಅಂಕಗಳನ್ನು ಪಡೆದಿದ್ದಾರೆ.

ADVERTISEMENT

ಫಲಿತಾಂಶ ವೀಕ್ಷಣೆಯ ವೆಬ್‌ಸೈಟ್‌ಗಳು

kseab.karnataka.gov.in 

karresults.nic.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.