ADVERTISEMENT

ಉಡುಪಿಯಲ್ಲಿ ರಾಜ್ಯಮಟ್ಟದ ನಾರಾಯಣ ಗುರು ಜಯಂತಿ: ಜಿಲ್ಲಾಧಿಕಾರಿ ಜಿ.ಜಗದೀಶ್

23ರಂದು ನಾರಾಯಣ ಗುರು ಸಭಭವನದಲ್ಲಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2021, 14:18 IST
Last Updated 21 ಆಗಸ್ಟ್ 2021, 14:18 IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ವಹಿಸಿದ್ದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ವಹಿಸಿದ್ದರು.   

ಉಡುಪಿ: ಆ.23ರಂದು ನಗರದ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಯೋಜಿಸಲಾಗುತ್ತಿದ್ದು, ಕನ್ನಡ ಮತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲೆಯ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ ನಡೆಯಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳ ಪಾಲನೆಯಾಗಬೇಕು. ಆ.23ರಂದು ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಬೇಕು. ನಾರಾಯಣ ಗುರು ಅವರ ತತ್ವ ಆದರ್ಶಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮವನ್ನು ಆಕರ್ಷಕವಾಗಿಸಬೇಕು ಎಂದರು

ADVERTISEMENT

ಕೋವಿಡ್ ಹರಡುವಿಕೆ ತಡೆಯಲು ಈಗಾಗಲೇ ಹಲವು ನಿರ್ಬಂಧಗಳನ್ನು ಹಾಕಲಾಗಿದ್ದು, ಮೆರವಣಿಗೆ ಮಾಡಲು ಅವಕಾಶವಿಲ್ಲ. ಬದಲಾಗಿ, ಪೂಜಾ ಕಾರ್ಯಕ್ರಮಗಳನ್ನು ನಡೆಸಬಹುದು. ನಾರಾಯಣ ಗುರು ಅವರ ಪೂಜಾ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲ ಬಿಲ್ಲವ ಸಂಘಗಳಲ್ಲಿ ಆಚರಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ಬಿಲ್ಲವ ಸಂಘಟನೆಗಳ ಪಧಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.