
ಪ್ರಜಾವಾಣಿ ವಾರ್ತೆ
ಪೊಲೀಸ್
(ಸಾಂದರ್ಭಿಕ ಚಿತ್ರ)
ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಪಡೆಯಬಹುದೆಂದು ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ₹2.3 ಕೋಟಿ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯಾನಂದ ಎಂಬುವವರನ್ನು ಅಪರಿಚಿತರು ‘ದಿ ವೆಲ್ತ್ ಆರ್ಕಿಟೆಕ್ಟ್ಸ್’ ಎಂಬ ವಾಟ್ಸ್ಆ್ಯಪ್ ಗ್ರೂಪ್‌ಗೆ ಸೇರಿಸಿದ್ದು, ಆ ಗ್ರೂಪ್‌ನಲ್ಲಿ ಕೋಪರ್ನಿಕ್ ಡಿಮ್ಯಾಟ್ ಖಾತೆ ತೆರೆದು ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಬಗ್ಗೆ ಸಂದೇಶಗಳು ಬರುತ್ತಿದ್ದವು. ಅದರಂತೆ ಏ. 1ರಿಂದ ಮೇ 13ರವರೆಗೆ ಜಯಾನಂದ ಅವರು ಅಪರಿಚಿತರು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ₹2.30 ಕೋಟಿ ವರ್ಗಾವಣೆ ಮಾಡಿ ಮೋಸ ಹೋಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಹೂಡಿಕೆ ಮಾಡಿದ ಹಣವನ್ನಾಗಲಿ, ಲಾಭಾಂಶನ್ನಾಗಲಿ ನೀಡದೆ ವಂಚನೆ ಮಾಡಲಾಗಿದೆ ಎಂದು ಜಯಾನಂದ ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.