ADVERTISEMENT

ಹೆಬ್ರಿ: ಮಳೆಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 5:12 IST
Last Updated 22 ಆಗಸ್ಟ್ 2025, 5:12 IST
ಹೆಬ್ರಿ ತಾಲ್ಲೂಕಿನ ಚಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಸುಳಿಗಾಳಿಯಿಂದ ಹಾನಿ ಸಂಭವಿಸಿದ್ದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು 
ಹೆಬ್ರಿ ತಾಲ್ಲೂಕಿನ ಚಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಸುಳಿಗಾಳಿಯಿಂದ ಹಾನಿ ಸಂಭವಿಸಿದ್ದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು    

ಹೆಬ್ರಿ: ತಾಲ್ಲೂಕಿನ ಚಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಸುಳಿಗಾಳಿಯಿಂದ ಹಾನಿ ಸಂಭವಿಸಿದ್ದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಾರ ಗ್ರಾಮದ ಕೊಂಡೆಜೆಡ್ಡು, ಬಸದಿ ರಸ್ತೆ, ಹಂದಿ ಕಲ್ಲು, ಮಣಿಬಟ್ಟಲುವಿನಲ್ಲಿ ಮನೆ, ಅಂಗಡಿ, ತೋಟಗಳನ್ನು ಪರಿಶೀಲನೆ ನಡೆಸಿ, ಮಾಹಿತಿ ಪಡೆದರು. ಕಂದಾಯ ಅಧಿಕಾರಿಗಳಿಗೆ ತಿಳಿಸಿ ಶೀಘ್ರ ದಾಖಲೆಗಳನ್ನು ಪಡೆದುಕೊಂಡು ಪರಿಹಾರ ಒದಗಿಸುವಂತೆ ನಿರ್ದೇಶನ ನೀಡಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ಸುಮಾರು ಮನೆಗಳು ಹಾನಿಯಾಗಿವೆ. ಕೆಲವು ಮನೆಗಳು ಸಂಪೂರ್ಣ ಹಾನಿಯಾಗಿರುವುದು ಗಾಳಿಯ ತೀವ್ರತೆಯನ್ನು ತೋರಿಸುತ್ತದೆ. ಒಂದೇ ಕಡೆ 400 ಅಡಿಕೆ ಸಸಿಗಳು ನಾಶವಾಗಿರುವುದು ಗಮನಿಸಲಾಗಿದೆ. ಮೆಸ್ಕಾಂ ಇಲಾಖೆಗೆ ದೊಡ್ಡ ಪ್ರಮಾಣದ ನಷ್ಟ ಉಂಟಾಗಿದೆ. ಸಂತ್ರಸ್ತರಿಗೆ ಆದ್ಯತೆಯ ನೆಲೆಯಲ್ಲಿ ಪರಿಹಾರ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

ADVERTISEMENT

ಕುಂದಾಪುರ ಎ.ಸಿ ರಶ್ಮಿ ಎಸ್.ಆರ್., ಹೆಬ್ರಿ ತಹಶೀಲ್ದಾರ್ ಎಸ್.ಎ. ಪ್ರಸಾದ್, ಗ್ರಾಮಾಡಳಿತ ಅಧಿಕಾರಿ ನವೀನ್ ಕುಮಾರ್ ಕುಕ್ಕುಜೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಶೆಟ್ಟಿ, ಉಪಾಧ್ಯಕ್ಷ ಕೃಷ್ಣನಾಯ್ಕ್ ಚಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.