ಬ್ರಹ್ಮಾವರ: ಶೈಕ್ಷಣಿಕ ಸಾಧಕರೇ ಕ್ರೀಡಾಪಟುಗಳಾಗಬೇಕೆಂದಿಲ್ಲ. ಛಲ ಇದ್ದರೆ ಯಾರೂ ಸಾಧಕನಾಗಿ ಹೊರಹೊಮ್ಮಲು ಸಾಧ್ಯ ಎಂದು ಜಪಾನ್ ಮಿಯಾಜಾಕಿ ವಿಶ್ವವಿದ್ಯಾಲಯದ ಪ್ರೊ.ಹರೀಶ ಕುಮಾರ್ ಮಧ್ಯಸ್ಥ ಹೇಳಿದರು.
ಮಾಬುಕಳದ ಚೇತನಾ ಪ್ರೌಢಶಾಲೆಯ ಬಿ.ಡಿ ಶೆಟ್ಟಿ ಕ್ರೀಡಾಂಗಣದಲ್ಲಿ ಗುರುವಾರ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಚೇತನಾ ಪ್ರೌಢಶಾಲೆಯ ಸಹಯೋಗದಲ್ಲಿ ನಡದ ಪ್ರೌಢಶಾಲೆಯ ತಾಲ್ಲೂಕು ಮಟ್ಟದ ಕ್ರಿಕೆಟ್ ಟೂರ್ನಿಯಲ್ಲಿ ಅವರು ಮಾತನಾಡಿದರು.
ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಭರತ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಎಚ್. ಇಬ್ರಾಹಿಂ ಸಾಹೇಬ್, ಫಾರ್ಚುನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್ ಚೇರ್‌ಮ್ಯಾನ್ ತಾರನಾಥ ಶೆಟ್ಟಿ, ಐರೋಡಿ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ಶೆಟ್ಟಿ, ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ ಅಧ್ಯಕ್ಷೆ ಜ್ಯೋತಿ ಉದಯ ಕುಮಾರ್, ಶಾಲಾ ಆಡಳಿತ ಮಂಡಳಿಯ ಜತೆ ಕಾರ್ಯದರ್ಶಿ ವಿಘ್ನೇಶ್ವರ ಅಡಿಗ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಕರ ಸಂಘ ಬ್ರಹ್ಮಾವರ ತಾಲ್ಲೂಕು ಗ್ರೇಡ್ 1ರ ಅಧ್ಯಕ್ಷ ಚಂದ್ರಶೇಖರ, ದೈಹಿಕ ಶಿಕ್ಷಕರ ಸಂಘದ ಗ್ರೇಡ್ 2 ರ ಅಧ್ಯಕ್ಷ ಶ್ರೀಕಾಂತ ಸಾಮಂತ್ ಪಾಲ್ಗೊಂಡಿದ್ದರು.
ಬ್ರಹ್ಮಾವರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಕ ನಿತ್ಯಾನಂದ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಹರ್ಷವರ್ಧನ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.