
ಪ್ರಜಾವಾಣಿ ವಾರ್ತೆ
ಕಾರ್ಕಳ: ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳ ಆಧಾರ್ ಆಧಾರಿತ ಬಯೊ ಮೆಟ್ರಿಕ್ ಇ–ದೃಢೀಕರಣ ಕಡ್ಡಾಯ ಎಂದು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಬಯೊಮೆಟ್ರಿಕ್ ಇ–ದೃಢೀಕರಣಕ್ಕೆ ಒಳಪಡದೆ ಇದ್ದಲ್ಲಿ ಕೇಂದ್ರದ ಪಾಲಿನ ಶೇ 60ರಷ್ಟು ಮೊತ್ತ ಪಡೆಯುವಲ್ಲಿ ವಂಚಿತರಾಗಲಿದ್ದಾರೆ. ಕಾರ್ಕಳ, ಹೆಬ್ರಿ ತಾಲ್ಲೂಕಿನ ಶಾಲೆ– ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು ನ. 15ರೊಳಗೆ ಸಹಾಯಕ ನಿರ್ದೇಶಕರು, ಗ್ರೇಡ್ 2 ಅವರ ಕಚೇರಿ, ಕಾರ್ಕಳ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಕಡ್ಡಾಯವಾಗಿ ಬಯೊಮೆಟ್ರಿಕ್ ಇ– ದೃಢೀಕರಣ ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.