ADVERTISEMENT

ಬ್ರಹ್ಮಾವರ |ವಿದ್ಯಾರ್ಥಿಗಳು ಕೌಶಲ್ಯ ವೃದ್ಧಿಸಿಕೊಳ್ಳಿ: ಆನಂದ ಸಿ ಕುಂದರ್‌

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2025, 5:10 IST
Last Updated 29 ಸೆಪ್ಟೆಂಬರ್ 2025, 5:10 IST
   

ಬ್ರಹ್ಮಾವರ: ಕೋಟ ಪಡುಕರೆಯ ಲಕ್ಷ್ಮೀಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾನ್ವೇಷಣೆ ಕಾರ್ಯಕ್ರಮ ಈಚೆಗೆ ನಡೆಯಿತು.

ಗೀತಾನಂದ ಫೌಂಡೇಷನ್‌ ಪ್ರವರ್ತಕ ಆನಂದ ಸಿ ಕುಂದರ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಗುರು–ಹಿರಿಯರಲ್ಲಿ ಗೌರವ ಬೆಳೆಸಿಕೊಳ್ಳಬೇಕು ಹಾಗೂ ಕೌಶಲ್ಯ ವೃದ್ಧಿಸಿಕೊಂಡು ಸಮಾಜಕ್ಕೆ ಆಸ್ತಿಯಾಗಿ ರೂಪುಗೊಳ್ಳಬೇಕು ಎಂದರು.

ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಂಡು ಯಶಸ್ಸಿನ ಮೆಟ್ಟಿಲೇರಬೇಕು. ದುರ್ವ್ಯಸನಗಳಿಂದ ದೂರವಿರಬೇಕು ಎಂದು ಹೇಳಿದರು.

ADVERTISEMENT

ಮಣೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನಿಸ್‌ ಬಾಂಜೆ ಮಾತನಾಡಿದರು. ಗೀತಾನಂದ ಫೌಂಡೇಷನ್‌ ವತಿಯಿಂದ ಸ್ಥಳೀಯ ಪದವಿಪೂರ್ವ ಕಾಲೇಜಿನಿಂದ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶುಲ್ಕ ವಿತರಣೆ ನೆರವೇರಿತು.

ಪ್ರಾಂಶುಪಾಲ ರಾಜೇಂದ್ರ ಎಸ್‌. ನಾಯಕ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯುಎಸಿ ಸಂಚಾಲಕ ಸುಬ್ರಹ್ಮಣ್ಯ ಎ., ಉದ್ಯಮಿ ಮಹೇಶ್‌ ಪೂಜಾರಿ, ಶಿಕ್ಷಕ ರಕ್ಷಕ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದಿನ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ತ್ರಿಶಾ, ಸಾಗರ್, ಸುಪ್ರೀತಾ, ಸೃಷ್ಟಿ, ಚಂದನ್‌, ಶ್ರದ್ಧಾ, ಆಕಾಶ್‌ ಇದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ ಆಚಾರ್‌ ಸ್ವಾಗತಿಸಿದರು. ಸಾಂಸ್ಕೃತಿಕ ಸಂಚಾಲಕ ಶಂಕರ ನಾಯ್ಕ್ ವಂದಿಸಿದರು. ಉಪನ್ಯಾಸಕಿ ರಶ್ಮಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.