
ಪ್ರಜಾವಾಣಿ ವಾರ್ತೆ
ಉಡುಪಿ: ಕವಿ ಮತ್ತು ವಿಮರ್ಶಕ ಸುಬ್ರಾಯ ಚೊಕ್ಕಾಡಿ ಅವರು ಪ್ರತಿಷ್ಠಿತ ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ, ಅನುವಾದ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತಿಗಳಿಗೆ ಎಸ್.ವಿ.ಪಿ. ಪ್ರತಿಷ್ಠಾನದಿಂದ ನೀಡುವ ಪ್ರಶಸ್ತಿ ಇದಾಗಿದೆ. 2026ರ ಸಾಲಿನಿಂದ ಈ ಪ್ರಶಸ್ತಿಯನ್ನು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವುದು. ಪ್ರಶಸ್ತಿಯು
₹25 ಸಾವಿರ ನಗದು ಒಳಗೊಂಡಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.