ಉಡುಪಿ: ಮಂಗಳೂರಿನಲ್ಲಿ ನಡೆದ ಗೃಹಸಚಿವರ ಸಭೆಯಲ್ಲಿ ಧಮ್ಕಿ ಹಾಕಿದವರನ್ನು ಬಂಧಿಸುವ ತಾಕತ್ತು ಈ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಸುದ್ದಿಗಾರರ ಜೊತೆ ಇಲ್ಲಿ ಸೋಮವಾರ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ಬರೆದರೆ ಅಂಥವರನ್ನು ಬಂಧಿಸಲಾಗುತ್ತದೆ. ಹಿಂದೂ ಸಮಾಜದ ಪರವಾಗಿರುವವರ ಮೇಲೆ ಕೇಸು ದಾಖಲಿಸಲಾಗುತ್ತದೆ ಎಂದು ಅವರು ಆರೋಪಿಸಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಯಾವಾಗೆಲ್ಲ ಮುಖ್ಯಮಂತ್ರಿ ಆಗಿದ್ದಾರೋ ಆಗೆಲ್ಲಾ ಹಿಂದೂಗಳ ಮೇಳೆ ನಿರಂತರ ದಾಳಿ ನಡೆಯುತ್ತಿರುತ್ತದೆ ಎಂದರು.
ಹಿಂದೂಗಳ ಪರವಾಗಿ ಇರುವವರನ್ನು ಬಂಧಿಸಲು ಕೋಮು ನಿಗ್ರಹದಳ ರಚಿಸಲಾಗುತ್ತಿದೆ. ಎಲ್ಲಾ ಸಮುದಾಯಗಳಿಗೆ ಸರಿಯಾದ ನ್ಯಾಯ ಕೊಟ್ಟು, ಇಂತಹ ದಳ ರಚಿಸಲಿ. ಆದರೆ ಕಾಂಗ್ರೆಸ್ ಸರ್ಕಾರದ ಈ ದಳ ಒಂದೇ ಸಮುದಾಯಕ್ಕೆ ಸೀಮಿತವಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.