ADVERTISEMENT

ಮೇ 28ರಂದು ಅಮೃತ ಭಾರತಿಗೆ ಕನ್ನಡದ ಆರತಿ: ಸಚಿವ ಸುನಿಲ್ ಕುಮಾರ್ ಸಭೆ

​ಪ್ರಜಾವಾಣಿ ವಾರ್ತೆ
Published 10 ಮೇ 2022, 15:10 IST
Last Updated 10 ಮೇ 2022, 15:10 IST
ಉಡುಪಿ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯದಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪು ಮೆಲುಕು ಹಾಕುವ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ ಆಂದೋಲನದಂತೆ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ 75ನೇ ಸ್ವಾತಂತ್ರ್ಯ ಸಂಗ್ರಾಮದ ಅಂಗವಾಗಿ ಹಮ್ಮಿಕೊಂಡಿರುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯದಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪು ಮೆಲುಕು ಹಾಕುವ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ ಆಂದೋಲನದಂತೆ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ 75ನೇ ಸ್ವಾತಂತ್ರ್ಯ ಸಂಗ್ರಾಮದ ಅಂಗವಾಗಿ ಹಮ್ಮಿಕೊಂಡಿರುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   

ಉಡುಪಿ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯದಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪು ಮೆಲುಕು ಹಾಕುವ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ ಆಂದೋಲನದಂತೆ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ 75ನೇ ಸ್ವಾತಂತ್ರ್ಯ ಸಂಗ್ರಾಮದ ಅಂಗವಾಗಿ ಹಮ್ಮಿಕೊಂಡಿರುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಹಲವು ಮಹಾನ್ ನಾಯಕರು ಜೀವ ತ್ಯಾಗ ಮಾಡಿದ್ದಾರೆ. ಅಂತಹ ಹೋರಾಟಗಾರರ ಜೀವನದ ಕಥೆ, ಹೋರಾಟದ ವಿವಿಧ ಹಂತಗಳು ಸೇರಿದಂತೆ ಸ್ವಾತಂತ್ರ್ಯದ ಹೋರಾಟಕ್ಕೆ ಕನ್ನಡಿಗರ ಕೊಡುಗೆಗಳನ್ನು ಯುವಜನತೆಗೆ ಹಾಗೂ ಸಾರ್ವಜನಿಕರಿಗೆ ಹಾಗೂ ಹೊರರಾಜ್ಯದವರಿಗೆ ತಿಳಿಸಲು ಕಾರ್ಯಕ್ರಮವನ್ನು ವಿಭಿನ್ನವಾಗಿ ಹಮ್ಮಿಕೊಳ್ಳಲಾಗಿದೆ ಎಂದರು.

ADVERTISEMENT

ಜಿಲ್ಲೆಯಲ್ಲಿ ಮೇ 28 ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಅಜ್ಜರಕಾಡು ಹಾಗೂ ಕುಂದಾಪುರದ ಬಸ್ರೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಸರ್ಕಾರಿ ಕಾರ್ಯಕ್ರಮವಾಗದೆ ಜನಪರ ಕಾರ್ಯಕ್ರಮವಾಗಬೇಕು ಎಂಬ ನಿಟ್ಟಿನಲ್ಲಿ ಯುವಕ ಸಂಘಗಳು, ಸಾಮಾಜಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಕಾರ್ಯಕ್ರಮದ ಯಶಸ್ಸಿಗೆ ತಾಲ್ಲೂಕು ಮಟ್ಟದಲ್ಲಿ ಸಮಿತಿ ಸಭೆಗಳನ್ನು ಸಂಘಟನೆಗಳ ಪದಾಧಿಕಾರಿಗಳ ಜತೆ ನಡೆಸಿ, ರೂಪುರೇಷೆಗಳನ್ನು ಸಿದ್ಧಪಡಿಸಬೇಕು. ಅರ್ಥ ಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಈಗಾಗಲೇ ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟ ನಡೆದ 75 ಸ್ಥಳಗಳ ಕುರಿತು ಪುಸ್ತಕ ಬಿಡುಗಡೆ ಮಾಡಲಾಗಿದೆ. ಆ.9 ರಿಂದ 15 ರವರೆಗೆ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲಾಗುವುದು ಎಂದರು.

ಜಿಲ್ಲೆಯಾದ್ಯಂತ ರಥಯಾತ್ರೆಯ ಪೂರ್ವಭಾವಿಯಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ದೇಶಭಕ್ತಿ ಸ್ಫರ್ಧೆ, ರಂಗೋಲಿ ಸ್ಪರ್ಧೆ, ಕವನ ರಚನೆ ಸ್ಪರ್ಧೆ ಸೇರಿದಂತೆ ಮತ್ತಿತರ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು ಎಂದರು.

ರಥಯಾತ್ರೆ ತಂಗುವ ಸ್ಥಳಗಳಲ್ಲಿ ವೇದಿಕೆ ಕಾರ್ಯಕ್ರಮ, ಉಪನ್ಯಾಸ, ಸ್ವಾತಂತ್ರ್ಯ ಹೋರಾಟ ನೆನಪಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿವೆ ಎಂದರು.

ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್, ಎಸ್‌ಪಿ ಎನ್. ವಿಷ್ಣುವರ್ಧನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಸಂಘ-ಸಂಸ್ಥೆಯ ಪದಾಧಿಕಾರಿಗಳು, ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಇಒಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.