ADVERTISEMENT

ರಾಜ್ಯದಲ್ಲಿ ಮೋದಿ ಮಾದರಿ ಆಡಳಿತ: ಸುನಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 12:26 IST
Last Updated 7 ಆಗಸ್ಟ್ 2021, 12:26 IST
ವಿ. ಸುನಿಲ್ ಕುಮಾರ್
ವಿ. ಸುನಿಲ್ ಕುಮಾರ್   

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಮಾದರಿಯ ಆಡಳಿತ ರಾಜ್ಯದಲ್ಲಿ ಜಾರಿಯಾಗಬೇಕು ಎಂಬ ಆಶಯದಿಂದ ಆಡಳಿತದಲ್ಲಿ ಹೊಸತನ ಹಾಗೂ ಚುರುಕುತನ ತರಲು ಹೊಸಬರಿಗೆ ಹೊಸ ಖಾತೆಗಳನ್ನು ನೀಡಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ ಹೇಳಿದರು.

ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮಹತ್ವದ ಖಾತೆ ನೀಡುವ ಮೂಲಕ ದೊಡ್ಡ ಜವಾಬ್ದಾರಿ ವಹಿಸಿದ್ದು, ಸಮರ್ಥವಾಗಿ ನಿಭಾಯಿಸುತ್ತೇನೆ. ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಹಳೆಯ ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನೆಲ, ಜಲ ಹಾಗೂ ಭಾಷೆಯ ವಿಚಾರ ಬಂದಾಗ ರಾಜಿ ಪ್ರಶ್ನೆ ಇಲ್ಲ. ಭಾಷೆ ಹಾಗೂ ಸಂಸ್ಕೃತಿ ಒಟ್ಟಾಗಿ ಸಾಗಬೇಕು. ತುಳು ಬಾಷೆ ಹಾಗೂ ಕರಾವಳಿ ಸಂಸ್ಕೃತಿಯ ಉಳಿವಿಗೆ ವಿಶೇಷ ಒತ್ತು ನೀಡಲಾಗುವುದು. ಜತೆಗೆ ಖಾತೆಯ ಜವಾಬ್ದಾರಿ, ಆಡತಳಿತದ ನಿರ್ವಹಣೆ ಹಾಗೂ ಜನಸಾಮಾನ್ಯರ ನಿರೀಕ್ಷೆಗಳಿಗೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.