ADVERTISEMENT

ಕಲ್ಲಿದ್ದಲು ಕೊರತೆ: ರಾಜ್ಯದ ಪಾಲು ಪೂರೈಕೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2021, 15:09 IST
Last Updated 8 ಅಕ್ಟೋಬರ್ 2021, 15:09 IST
ಸಚಿವ ಸುನಿಲ್ ಕುಮಾರ್
ಸಚಿವ ಸುನಿಲ್ ಕುಮಾರ್   

ಉಡುಪಿ: ಕಲ್ಲಿದ್ದಲು ಗಣಿಗಾರಿಕೆಗೆ ಮಳೆ ಅಡ್ಡಿಯಾಗಿದ್ದು, ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಾಜ್ಯಕ್ಕೆ ಕೊಡಬೇಕಾದ ಕಲ್ಲಿದ್ದಲು ಪಾಲನ್ನು ನೀಡಬೇಕು, ಒಡಿಶಾ ಹಾಗೂ ಮಹಾರಾಷ್ಟ್ರದಿಂದ ಬರಬೇಕಾದ ಕಲ್ಲಿದ್ದಲು ಪೂರೈಸಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದು, ನಾಲ್ಕೈದು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗುವುದು. ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ ಎಂದು ಸುನಿಲ್ ಕುಮಾರ್ ತಿಳಿಸಿದರು.

ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡನೀಯ. 371ನೇ ಕಲ ರದ್ದಾದ ಬಳಿಕ ಕಾಶ್ಮೀರದಲ್ಲಿ ಜನಜೀವನ ಸಹಜಸ್ಥಿತಿಗೆ ಬಂದಿತ್ತು. ಇದನ್ನು ಸಹಿಸದವರು ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದು, ಕೇಂದ್ರ ಸರ್ಕಾರ ಹತ್ತಿಕ್ಕಲಿದೆ ಎಂದರು.

ADVERTISEMENT

ಬಿಜೆಪಿ ಸರ್ಕಾರದಲ್ಲಿ ಗೋವುಗಳ ಕಳವಿಗೆ ಅವಕಾಶ ನೀಡುವುದಿಲ್ಲ. ಗೋಕಳ್ಳತನ ಪ್ರಕರಣಗಳಲ್ಲಿ ಹಿಂದೆ ಭಾಗಿಯಾದವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಎಚ್ಚರಿಕೆ ನೀಡಲಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.