ADVERTISEMENT

ಕುಂದಾಪುರ ನ್ಯಾಯಾಲಯಕ್ಕೆ ಶಂಕಿತ ನಕ್ಸಲರು ಹಾಜರು

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 6:29 IST
Last Updated 18 ಜುಲೈ 2025, 6:29 IST
ಕುಂದಾಪುರದ ನ್ಯಾಯಾಲಯಕ್ಕೆ ಶುಕ್ರವಾರ ಮೂವರು ಶಂಕಿತ ನಕ್ಸಲ್‌ವಾದಿಗಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಹಾಜರುಪಡಿಸಲಾಯ್ತು.
ಕುಂದಾಪುರದ ನ್ಯಾಯಾಲಯಕ್ಕೆ ಶುಕ್ರವಾರ ಮೂವರು ಶಂಕಿತ ನಕ್ಸಲ್‌ವಾದಿಗಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಹಾಜರುಪಡಿಸಲಾಯ್ತು.   

ಕುಂದಾಪುರ: ಕೇರಳ ಹಾಗೂ ಬೆಂಗಳೂರಿನ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರು ಶಂಕಿತ ನಕ್ಸಲರನ್ನು ಗುರುವಾರ ಬಿಗಿ ಭದ್ರತೆಯಲ್ಲಿ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಶಂಕರನಾರಾಯಣ ಹಾಗೂ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ಖುದ್ದು ಹಾಜರುಪಡಿಸಲು ನ್ಯಾಯಾಲಯದ ಸೂಚಿಸಿದ ಕಾರಣ,  ಕೇರಳದ ಜೈಲಿನಲ್ಲಿದ್ದ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಆಲಿಯಾಸ್ ಉಷಾ ಹಾಗೂ ಬೆಂಗಳೂರಿನ ಜೈಲಿನಲ್ಲಿದ್ದ ವನಜಾಕ್ಷಿ ಅವರನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಶಂಕಿತ ನಕ್ಸಲರಿಗೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿರುವ ಪ್ರಕರಣಗಳ ತನಿಖೆಗಳು ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿದ್ದು, ಕುಂದಾಪುರ ಉಪ ವಿಭಾಗಕ್ಕೆ ಸಂಬಂಧಿಸಿದ ತನಿಖೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ಡಿವೈಎಸ್‌ಪಿ ಎಚ್.ಡಿ.ಕುಲಕರ್ಣಿ ಅವರು ನಿರ್ವಹಿಸುತ್ತಿದ್ದಾರೆ.  ನ್ಯಾಯಾಲಯದ ಪ್ರಕ್ರಿಯೆ ಬಳಿಕ ಮೂವರನ್ನು ಮರಳಿ ಜೈಲುಗಳಿಗೆ ಕಳುಹಿಸಲಾಗಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.