ಬ್ರಹ್ಮಾವರದ ಜಿ.ಎಂ. ಸಮೂಹ ವಿದ್ಯಾಸಂಸ್ಥೆಯಲ್ಲಿ ನಿರ್ಮಿಸಿದ ಈಜು ಕೊಳ ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್‌ನ್ನು ಗುರುವಾರ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಉದ್ಘಾಟಿಸಿದರು
ಬ್ರಹ್ಮಾವರ: ಇಲ್ಲಿನ ಜಿ.ಎಂ. ಸಮೂಹ ವಿದ್ಯಾಸಂಸ್ಥೆಯಲ್ಲಿ ನಿರ್ಮಿಸಿದ ಈಜು ಕೊಳ ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್‌ನ್ನು ಗುರುವಾರ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಈಜುಕೊಳ ಮತ್ತು ಮನರಂಜನೆಗೆ ಅಮ್ಯೂಸ್‌ಮೆಂಟ್ ಪಾರ್ಕ್‌ನ್ನು ನೀಡುವ ನನ್ನ ಕನಸು ಸಾಕಾರಗೊಂಡಿದೆ’ ಎಂದರು.
ಇಲ್ಲಿ ತರಬೇತಿ ಪಡೆದ ಮಕ್ಕಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕವನ್ನು ಗೆಲ್ಲುವಂತಾಗಲಿ ಎಂದು ಶುಭಹಾರೈಸಿದರು.
ಜಿ.ಎಂ ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲ ಪ್ರಣವ ಶೆಟ್ಟಿ, ಜಿ.ಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಜಾರ್ಜ್ ಕುರಿಯನ್ ಪೋಷಕರ ಹಾಗೂ ಮಕ್ಕಳ ಉತ್ತಮ ಪ್ರತಿಕ್ರಿಯೆಗೆ ಅಭಿನಂದಿಸಿ ಶುಭಹಾರೈಸಿದರು.
ಏ. 2ರಿಂದ 20ರವರೆಗೆ ಮೊದಲ ಬ್ಯಾಚ್, ಈಗಾಗಲೇ ಪ್ರಾರಂಭಗೊಂಡು ಪೋಷಕರು ಹಾಗೂ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಪ್ರತಿ ದಿನ ಬೆಳಿಗ್ಗೆ 7.30ರಿಂದ ತರಬೇತಿ ನೀಡಲಾಗುತ್ತಿದ್ದು, ಈಜುಕೊಳದಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮ ಅಳವಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.