ADVERTISEMENT

ಉಡುಪಿ: ತಾಲ್ಲೂಕು ಮಟ್ಟದ ಚೆಸ್ ಟೂರ್ನಿ

​ಪ್ರಜಾವಾಣಿ ವಾರ್ತೆ
Published 22 ಜುಲೈ 2022, 4:57 IST
Last Updated 22 ಜುಲೈ 2022, 4:57 IST
ಪಡುಬಿದ್ರಿಯಲ್ಲಿ ನಡೆದ ಉಡುಪಿ ತಾಲ್ಲೂಕು ಮಟ್ಟದ ಚೆಸ್ ಟೂರ್ನಿಯನ್ನು ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಉದ್ಘಾಟಿಸಿದರು
ಪಡುಬಿದ್ರಿಯಲ್ಲಿ ನಡೆದ ಉಡುಪಿ ತಾಲ್ಲೂಕು ಮಟ್ಟದ ಚೆಸ್ ಟೂರ್ನಿಯನ್ನು ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಉದ್ಘಾಟಿಸಿದರು   

ಪಡುಬಿದ್ರಿ: ಉಡುಪಿ ತಾಲ್ಲೂಕು ಮಟ್ಟದ ಚೆಸ್ ಟೂರ್ನಿಯು ಮಂಗಳವಾರ ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಜರುಗಿತು. 34 ಶಾಲೆಗಳಿಂದ ಸುಮಾರು 100 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಟೂರ್ನಿಯನ್ನು ಉದ್ಘಾಟಿಸಿದರು. ಉಡುಪಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಜಗದಾಭಿರಾಮ ಸ್ವಾಮಿ, ಪಡುಬಿದ್ರಿ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಕೋಟ್ಯಾನ್, ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆನುವಂಶಿಕ ಮೊಕ್ತೇಸರ ರತ್ನಾಕರ ರಾಜ್ ಅರಸು ಪಾಲ್ಗೊಂಡರು.

ಕಿನ್ನ್ಯಕ್ಕ ಬಲ್ಲಾಳ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾಕಾಂತ್ ರಾವ್, ಉಡುಪಿ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಗಣಪತಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಪಿ.ಕೆ. ಗಣಪತಿ ಭಟ್, ಎಸ್‌ಬಿವಿಪಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಶೋಕ, ದೈಹಿಕ ಶಿಕ್ಷಣ ಶಿಕ್ಷಕ ಶ್ರೀಶ ಅವರು ವೇದಿಕೆಯಲ್ಲಿ ಇದ್ದರು.

ADVERTISEMENT

ಪಿ. ಕೆ. ಗಣಪತಿ ಭಟ್ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕ ಶ್ರೀಶ ವಂದಿಸಿದರು. ಶಿಕ್ಷಕ ರಾಘವೇಂದ್ರ ರಾವ್ ನಿರೂಪಿಸಿದರು. ಸಂಜೆ ನಡೆದ ಬಹುಮಾನ ವಿತರಣೆ ಸಮಾರಂಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ನಿರ್ದೇಶಕ, ಗಣಪತಿ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಅನಂತ ಪಟ್ಟಾಭಿ ರಾವ್ ಮುಖ್ಯ ಅತಿಥಿಯಾಗಿದ್ದರು. ಶಿಕ್ಷಕಿ ಅನುರಾಧಾ ಸ್ವಾಗತಿಸಿದರು. ಅಕ್ಷತಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ನರೇಂದ್ರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.