
ಉಡುಪಿ: ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಸಾಧನೆಯ ಶಿಖರವನ್ನು ಏರಬೇಕಾದ ಅನಿವಾರ್ಯತೆ ಇಂದು ಇದೆ ಎಂದು ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು.
ಮಿಲಾಗ್ರಿಸ್ ಕಾಲೇಜಿನ ಆವರಣದಲ್ಲಿ ಕಾಲೇಜಿನ 140 ವಿದ್ಯಾರ್ಥಿಗಳಿಗೆ ಗುರುವಾರ ಉಚಿತ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಇಂದು ಕಲಿಯಲು ಸಾಕಷ್ಟು ಅವಕಾಶಗಳಿದ್ದು ಲಭ್ಯವಿರುವ ಸಂಪನ್ಮೂಲಗಳನ್ನು ಸರಿಯಾಗಿ ಬಳಸಿಕೊಂಡು ವ್ಯಕ್ತಿತ್ವ ವಿಕಸನಗೊಳಿಸಬೇಕು ಎಂದರು.
ಹೊಸ ಕಲಿಕಾ ತಂತ್ರಜ್ಞಾನಕ್ಕೆ ಪೂರಕವಾಗುವ ಸಾಧನಗಳನ್ನು ಬಳಸಿಕೊಂಡರೆ ಇನ್ನಷ್ಟು ಪರಿಣಾಮಕಾರಿಯಾಗಿ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಕಾಲೇಜು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವುದರ ಮೂಲಕ ಅವರ ಕಲಿಕಾ ಆಸಕ್ತಿಗೆ ಬೆಂಬಲವಾಗಿ ನಿಂತಿದೆ ಎಂದರು.
ಕಾರ್ಯಕ್ರಮದಲ್ಲಿ ಸೈಲಾಸ್ ಪಿಯು ಕಾಲೇಜಿನ ಪ್ರಾಂಶುಪಾಲ ಜಾರ್ಜ್ ಕೆ., ಕಲ್ಯಾಣಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್, ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಆಳ್ವಾ, ಸಹ ಪ್ರಾಂಶುಪಾಲ ಸೋಫಿಯಾ ಡಾಯಸ್, ಪಿಯು ಕಾಲೇಜಿನ ಪ್ರಾಂಶುಪಾಲ ರಿಚ್ಚಾರ್ಡ್ ಜೀವನ್ ಮೋರಾಸ್, ಸಿಬ್ಬಂದಿ ಸಂಯೋಜಕ ಸುಷ್ಮಾ ಶೆಟ್ಟಿ, ಐಕ್ಯೂಎಸಿ ಸಂಯೋಜಕ ಶಾಲೆಟ್ ಮಥಾಯಸ್, ರಾಧಿಕಾ ಪಾಟ್ಕರ್ ಉಪಸ್ಥಿತರಿದ್ದರು.
ಶಾಲೆಟ್ ಮಥಾಯಸ್ ಸ್ವಾಗತಿಸಿ, ಸುಷ್ಮಾ ಶೆಟ್ಟಿ ವಂದಿಸಿದರು. ಚೈತ್ರಾ ಕಾರ್ಯಕ್ರಮ ನಿರೂಪಿಸಿದರು
ಸಂಪನ್ಮೂಲಗಳ ಸದ್ಬಳಕೆಗೆ ಕರೆ ಹೊಸ ಕಲಿಕಾ ತಂತ್ರಜ್ಞಾನಕ್ಕೆ ತೆರೆದುಕೊಳ್ಳಲು ಸಲಹೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.