ADVERTISEMENT

‘ತೀಸ್ತಾ ಸೆಟಲ್ವಾಡ್ ಬಂಧನ: ಪ್ರಜಾಪ್ರಭುತ್ವದ ಕಗ್ಗೊಲೆ’

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 15:48 IST
Last Updated 26 ಜೂನ್ 2022, 15:48 IST
ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಬಂಧನ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಭಾನುವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ತುರ್ತು ಸಭೆ ನಡೆಸಿತು.
ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಬಂಧನ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಭಾನುವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ತುರ್ತು ಸಭೆ ನಡೆಸಿತು.   

ಉಡುಪಿ: ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಹೇಳಿದರು.

ಭಾನುವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಸರ್ವಾಧಿಕಾರಿ ಹಿಟ್ಲರ್ ಮಾದರಿ ಆಡಳಿತದತ್ತ ಭಾರತ ಸಾಗುತ್ತಿದೆ. ಅನ್ಯಾಯದ ವಿರುದ್ಧ, ದೌರ್ಜನ್ಯದ ವಿರುದ್ಧ, ದುರಾಡಳಿತದ ವಿರುದ್ಧ ಧನಿ ಎತ್ತಿದವರನ್ನು ಹತ್ತಿಕ್ಕಲಾಗುತ್ತಿದೆ.

ಬಡವರ, ದಲಿತರ ಪರ ಹೋರಾಟ ಮಾಡುವ ಹೋರಾಟಗಾರರಮ ಮೇಲೆ ಪೊಲೀಸರೇ ಸುಳ್ಳು ಕೇಸು ದಾಖಲಿಸಿ ಜನಪರ ಚಳವಳಿಗಾರರನ್ನು ಜೈಲಿಗೆ ಅಟ್ಟಲಾಗುತ್ತಿದೆ ಎಂದರು.

ADVERTISEMENT

ತುರ್ತು ಸಭೆಯಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಪರಮೇಶ್ವರ್ ಉಪ್ಪೂರು, ಭಾಸ್ಕರ್ ಮಾಸ್ಟರ್ ಕುಂಜಿಬೆಟ್ಟು, ಶ್ಯಾಮಸುಂದರ ತೆಕ್ಕಟ್ಟೆ, ಮಂಜುನಾಥ ಬಾಳ್ಕುದ್ರು, ಶ್ರೀಧರ್ ಕುಂಜಿಬೆಟ್ಟು, ಪ್ರವೀಣ್ ಗುಂಡಿಬೈಲು, ಶಿವರಾಮ ಕಾಪು, ರಾಘವ ಬೆಳ್ಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.