ADVERTISEMENT

ದೇವಸ್ಥಾನಕ್ಕೆ ಹೋಗುವುದರಿಂದ ಮಾತ್ರ ಶುದ್ಧತೆ ಬರುವುದಿಲ್ಲ: ಮಾಣಿಲ ಶ್ರೀ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 7:22 IST
Last Updated 18 ನವೆಂಬರ್ 2025, 7:22 IST
ಕಾರ್ಕಳ ತಾಲ್ಲೂಕಿನ ಬೆಳ್ಮಣ್ ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೊಸೈಟಿಯ ಸ್ವಸಹಾಯ ಸಂಘಗಳ ಒಕ್ಕೂಟದ ಉದ್ಘಾಟನೆ ಹಾಗೂ ಶ್ರೀ ಲಕ್ಷ್ಮಿ ಪೂಜೆಯನ್ನು ಮಾಣಿಲ ಶ್ರೀ ಉದ್ಘಾಟಿಸಿದರು 
ಕಾರ್ಕಳ ತಾಲ್ಲೂಕಿನ ಬೆಳ್ಮಣ್ ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೊಸೈಟಿಯ ಸ್ವಸಹಾಯ ಸಂಘಗಳ ಒಕ್ಕೂಟದ ಉದ್ಘಾಟನೆ ಹಾಗೂ ಶ್ರೀ ಲಕ್ಷ್ಮಿ ಪೂಜೆಯನ್ನು ಮಾಣಿಲ ಶ್ರೀ ಉದ್ಘಾಟಿಸಿದರು    

ಕಾರ್ಕಳ: ದೇವಸ್ಥಾನಕ್ಕೆ ಹೋದರೆ ಸಾಲದು, ಮೊದಲು ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಬೇಕು ಎಂದು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.

ತಾಲ್ಲೂಕಿನ ಬೆಳ್ಮಣ್ ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೊಸೈಟಿಯ ಸ್ವಸಹಾಯ ಸಂಘಗಳ ಒಕ್ಕೂಟದ ಉದ್ಘಾಟನೆ ಹಾಗೂ ಬೆಳ್ಮಣ್ ಕುಂಭನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ವಸಹಾಯ ಸಂಘಗಳ ಒಕ್ಕೂಟದ ಉದ್ಘಾಟನೆ, ಲಕ್ಷ್ಮೀ ಪೂಜೆಗೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.

ಸೊಸೈಟಿ ಅಧ್ಯಕ್ಷ ಕುಶ ಆರ್ ಮೂಲ್ಯ ಇನ್ನಾ ಅಧ್ಯಕ್ಷತೆ ವಹಿಸಿದ್ದರು. ಶಾಸಕ ವಿ.ಸುನಿಲ್ ಕುಮಾರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ಉದಯ ಶೆಟ್ಟಿ ಮುನಿಯಾಲು, ಬೆಳ್ಮಣ್ ಶೋಧನ ಕುಮಾರ್ ಶೆಟ್ಟಿ, ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುರೇಂದ್ರ ಶೆಟ್ಟಿ ಕೋರಿಬೆಟ್ಟುಗುತ್ತು, ಸೊಸೈಟಿಯ ಉಪಾಧ್ಯಕ್ಷ ಜಗನ್ನಾಥ ಕುಲಾಲ್, ಪ್ರಭಾಕರ್ ಕುಲಾಲ್, ಜಯರಾಮ್ ಕುಲಾಲ್, ರಘು ಮೂಲ್ಯ, ಕುಲಾಲ ಸಂಘದ ಗಣೇಶ್ ಕುಲಾಲ್ ಬೋಳ, ವಿಠಲ ಮೂಲ್ಯ ಬೇಲಾಡಿ, ಸ್ವಸಹಾಯ ಸಂಘದ ಒಕ್ಕೂಟ ಅಧ್ಯಕ್ಷೆ ಉಷಾ ಸುರೇಂದ್ರ ಕುಲಾಲ್, ಪವಿತ್ರ ಗಿರೀಶ್ , ಚಂದ್ರಾವತಿ ಇನ್ನಾ ಉಪಸ್ಥಿತರಿದ್ದರು. ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಸತೀಶ್ ಹೊಸ್ಮಾರ್ ನಿರೂಪಿಸಿದರು. ಸೊಸೈಟಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬ್ರಿಜೆಶ್ ಕುಲಾಲ್ ವಂದಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.