ಉಡುಪಿ: ‘ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿರುವ ದಾಳಿಯ ವಿಚಾರ ತಿಳಿದು ವ್ಯಾಕುಲನಾಗಿದ್ದೇನೆ. ಇಂತಹ ಪ್ರವೃತ್ತಿ ಮುಂದುವರಿದರೆ ಭಾರತದಲ್ಲಿ ಸನಾತನ ಧರ್ಮವೇ ನಾಶವಾಗಬಹುದೆಂಬ ಆತಂಕ ಕಾಡುತ್ತಿದೆ’ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಪಶ್ಚಿಮ ಬಂಗಾಳ, ಕೇರಳದ ಕೆಲವೆಡೆ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದಾಗ ಇದರ ಹಿಂದೆ ಷಡ್ಯಂತ್ರ ಇದೆ ಎಂಬ ಅನುಮಾನ ಕಾಡುತ್ತಿದೆ. ಸರ್ಕಾರವು ಸಮಗ್ರ ತನಿಖೆ ನಡೆಸಿ ಈ ಸಮಸ್ಯೆಯನ್ನು ಪರಿಹರಿಸಬೇಕು. ಹಿಂದೂಗಳನ್ನೇ ಆಯ್ದು ನಾಶಮಾಡುವ ಹುನ್ನಾರ ಇದರ ಹಿಂದೆ ಇದೆ ಎಂದು ಅವರು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.