ADVERTISEMENT

ಉಡುಪಿ: ನಾಲ್ಕು ಅನಾಥ ಶವಗಳ ಅಂತ್ಯಸಂಸ್ಕಾರ, ನಾಗರಿಕ ಸಮಿತಿಯಿಂದ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 16:38 IST
Last Updated 15 ಜುಲೈ 2020, 16:38 IST
ವಾರಸುದಾರರಿಲ್ಲದ ನಾಲ್ಕು ಅನಾಥ ಶವಗಳ ಅಂತ್ಯ ಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ನೆರವೇರಿಸಿದರು.
ವಾರಸುದಾರರಿಲ್ಲದ ನಾಲ್ಕು ಅನಾಥ ಶವಗಳ ಅಂತ್ಯ ಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ನೆರವೇರಿಸಿದರು.   

ಉಡುಪಿ: ವಾರಸುದಾರರು ಪತ್ತೆಯಾಗದ ನಾಲ್ಕು ಅನಾಥ ಶವಗಳ ಅಂತ್ಯ ಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ನೆರವೇರಿಸಿದರು.

ಅನಾರೋಗ್ಯದಿಂದ ಈಚೆಗೆ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ವರು ವ್ಯಕ್ತಿಗಳು ಮೃತಪಟ್ಟಿದ್ದರು. ಶವಗಳನ್ನು ವಾರಸುದಾರರ ಬರುವಿಕೆಗಾಗಿ ಶವಾಗಾರದಲ್ಲಿ ಇಡಲಾಗಿತ್ತು. ಕಾಯುವಿಕೆ ಕಾಲಮಿತಿ ಕಳೆದರೂ ಯಾರೂ ಬಾರದಿರುವುದರಿಂದ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್‌ನನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಮುಂದೆ ನಿಂತುಅಂತ್ಯಸಂಸ್ಕಾರ ನಡೆಸಿದರು.

ನಗರ ಪೊಲೀಸ್ ಠಾಣೆಯ ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ, ಸಮಾಜಸೇವಕ ವಿಶುಶೆಟ್ಟಿ ಅಂಬಲಪಾಡಿ, ಗಣೇಶ್, ಸುಮಿತ್ರಾ ರಾವ್ ಅಂತ್ಯಕ್ರಿಯೆಗೆ ನೆರವಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.