ಉಡುಪಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿರುವ ಕುಂದಾಪುರ ತಾಲ್ಲೂಕಿನ ಯೋಧ ಬೀಜಾಡಿಯ ಅನೂಪ್ ಪೂಜಾರಿ ಅವರ ಅಂತ್ಯಸಂಸ್ಕಾರ ಬೀಜಾಡಿ ಸಮುದ್ರ ತೀರದಲ್ಲಿ ಗುರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಬೀಜಾಡಿ ಪಡುವಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅನೂಪ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಿರಿಸಲಾಗಿತ್ತು. ಅಗಲಿದ ಯೋಧನಿಗೆ ಸಾವಿರಾರು ಮಂದಿ ಅಂತಿಮ ನಮನ ಸಲ್ಲಿಸಿದರು.
ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.