ADVERTISEMENT

‘ಸಂಶೋಧನೆಯಲ್ಲಿ ಮೆಷಿನ್ ಲರ್ನಿಂಗ್‌ ಪಾತ್ರ ಮಹತ್ವದ್ದು’

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 4:16 IST
Last Updated 12 ಡಿಸೆಂಬರ್ 2025, 4:16 IST
ಕಾರ್ಕಳ ತಾಲ್ಲೂಕಿನ ನಿಟ್ಟೆ ಎನ್‌ಎಂಎಂಎಂ ತಾಂತ್ರಿಕ ಕಾಲೇಜಿನಲ್ಲಿ ಸೋಮವಾರ ಕಾರ್ಯಾಗಾರ ನಡೆಯಿತು
ಕಾರ್ಕಳ ತಾಲ್ಲೂಕಿನ ನಿಟ್ಟೆ ಎನ್‌ಎಂಎಂಎಂ ತಾಂತ್ರಿಕ ಕಾಲೇಜಿನಲ್ಲಿ ಸೋಮವಾರ ಕಾರ್ಯಾಗಾರ ನಡೆಯಿತು   

ಕಾರ್ಕಳ: ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನೆಯನ್ನು ಹೆಚ್ಚಿಸುವಲ್ಲಿ ಮೆಷಿನ್ ಲರ್ನಿಂಗ್‌ನ ಪರಿವರ್ತಿತ ಪಾತ್ರ ಮಹತ್ವದ್ದು ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ.ಗೋಪಾಲ್ ಮುಗೇರಾಯ ತಿಳಿಸಿದರು.

ತಾಲ್ಲೂಕಿನ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಆರೋಗ್ಯ ರಕ್ಷಣೆಯಲ್ಲಿ ಮೆಷಿನ್ ಲರ್ನಿಂಗ್ ತಂತ್ರಗಳ ಅನ್ವಯ  ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕ್ಲಿನಿಕಲ್ ಡಯಾಗ್ನೋಸ್ಟಿಕ್ಸ್, ಅಂತರಶಿಸ್ತೀಯ ನಾವೀನ್ಯತೆಯನ್ನು ಮುನ್ನಡೆಸಲು ಉದಯೋನ್ಮುಖ ತಂತ್ರಜ್ಞಾನಗಳ ಕಲಿಕೆ ಹಾಗೂ ಸಕ್ರಿಯ ಉಪಯೋಗದಲ್ಲಿ ತೊಡಗಿಸಿಕೊಳ್ಳಲು ಇದು ಅಗತ್ಯವಾಗಿದೆ ಎಂದರು.

ADVERTISEMENT

ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಮಾತನಾಡಿ, ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆ ಚಾಲಿತ ಪರಿಹಾರಗಳಿಗೆ ಹೆಚ್ಚುತ್ತಿರುವ ಬೇಡಿಕೆ ಮತ್ತು ಶಿಕ್ಷಣ ತಜ್ಞರು ಮತ್ತು ವೃತ್ತಿಪರರಿಗೆ ನಿರಂತರ ಕೌಶಲದ ಮಹತ್ವವನ್ನು ಅರಿಯಬೇಕಾಗಿದೆ ಎಂದರು.

ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಅಶ್ವಿನಿ ಬಿ ಸ್ವಾಗತಿಸಿದರು. ಕಾರ್ಯಕ್ರಮದ ಸಹ-ಸಂಯೋಜಕ ರಮೇಶ್ ಜಿ ವಂದಿಸಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕಿ ತಂಜಿಲಾ ನರ್ಗಿಸ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.