
ಉಡುಪಿ: ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನ ಕಟ್ಟಡದ ಮೇಲೆ ಅಳವಡಿಸಿದ್ದ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿಯ ಶಾಂತಿ ನಗರದ ಆರೀಫ್ ಯಾನೆ ಮುನ್ನ (37) ಹಾಗೂ ಕಾವೂರು ಉಲ್ಲಾಸ ನಗರದ ಅಬ್ದುಲ್ ಹಮೀದ್ (32) ಬಂಧಿತ ಆರೋಪಿಗಳು.
ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾರ್ಗದರ್ಶನದಲ್ಲಿ ಪೊಲೀಸರ ತಂಡವು ಆರೋಪಿಗಳನ್ನು ಬಂಧಿಸಿ, 51 ಕೆ.ಜಿ. ತಾಮ್ರದ ಹೊದಿಕೆ, ಎರಡು ಸೀಲಿಂಗ್ ಫ್ಯಾನ್ ಹಾಗೂ ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ರಿಕ್ಷಾ, ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಆರೀಫ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.