ADVERTISEMENT

ವಿಚಾರಗಳ ಪ್ರಚಾರಕ್ಕೆ ಅಡ್ಡಿ ಇಲ್ಲ; ಹಿಂಸೆಗೆ ಇಳಿದರೆ ಕ್ರಮ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 8:55 IST
Last Updated 11 ಏಪ್ರಿಲ್ 2022, 8:55 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಉಡುಪಿ: ವಿಚಾರಗಳನ್ನು ಪ್ರಚಾರ ಮಾಡಲು ಸರ್ಕಾರ ಅಡ್ಡಿ ಪಡಿಸುವುದಿಲ್ಲ. ಆದರೆ, ಕಾನೂನು ಕೈಗೆತ್ತಿಕೊಂಡರೆ, ಹಿಂಸೆಗೆ ಇಳಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಕುರಿತುಉಡುಪಿ ಹೆಲಿಪ್ಯಾಡ್‌ನಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದ ಸಿಎಂ, 'ಸಂವಿಧಾನ ಬದ್ಧವಾಗಿ ರಚನೆಯಾಗಿರುವ ‌ಸರ್ಕಾರಕ್ಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಗೊತ್ತಿದೆ. ಎಲ್ಲರೂ ಸಮಾನರು ಎಂಬ ದೃಷ್ಟಿಯಿಂದ ಸರ್ಕಾರ ಕೆಲಸ ಮಾಡುತ್ತಿದ್ದು, ಈ ವಿಚಾರದಲ್ಲಿ ವಿರೋಧ ಪಕ್ಷಗಳ ಪಾಠದ ಅಗತ್ಯ ಇಲ್ಲ ಎಂದರು.

ಹಿಂದೆ ನಡೆದ ಹಲವು ಯುವಕರ ಕೊಲೆ ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗಿದ್ದ ಸಂಘಟನೆಗಳ ಹಾಗೂ ಮುಖಂಡರ ಮೇಲಿದ್ದ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಕೈಬಿಟ್ಟಿತ್ತು. ಈಗ ಬಿಜೆಪಿಗೆ ಪಾಠ ಹೇಳಲು ಬರುತ್ತಿರುವ ಕಾಂಗ್ರೆಸ್‌ನಿಂದ ಕಲಿಯಬೇಕಾಗಿರುವುದು ಏನೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ADVERTISEMENT

ಸರ್ಕಾರ ಯಾವ ಸಂದರ್ಭದಲ್ಲಿ, ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೋ ತೆಗೆದುಕೊಳ್ಳಲಿದೆ. ಪ್ರಗತಿಪರವಾದ ರಾಜ್ಯವನ್ನು ಕಾಪಾಡಿಕೊಳ್ಳುವುದು ಗೊತ್ತಿದೆ ಎಂದು ಬೊಮ್ಮಾಯಿ ತಿರುಗೇಟು ನೀಡಿದರು‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.