ADVERTISEMENT

ಸಂಪುಟ ಸಭೆ ಬಗ್ಗೆ ಮಾಹಿತಿ ಇರಲಿಲ್ಲ: ಡಾ.ಸಿ.ಅಶ್ವತ್ಥ ನಾರಾಯಣ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 12:51 IST
Last Updated 27 ನವೆಂಬರ್ 2020, 12:51 IST
ಅಶ್ವತ್ಥ ನಾರಾಯಣ್‌, ಉಪ ಮುಖ್ಯಮಂತ್ರಿ
ಅಶ್ವತ್ಥ ನಾರಾಯಣ್‌, ಉಪ ಮುಖ್ಯಮಂತ್ರಿ   

ಉಡುಪಿ: ಸಂಪುಟ ಸಭೆ ತ್ವರಿತವಾಗಿ ನಿಶ್ಚಯವಾಗಿದ್ದರಿಂದ ಯಾರಿಗೂ ಸಭೆಯ ಬಗ್ಗೆ ಮಾಹಿತಿ ಇರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಅಶ್ವತ್ಥ ನಾರಾಯಣ್ ಹೇಳಿದರು.

ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಭಾಗವಹಿಸಲು ಶುಕ್ರವಾರ ಉಡುಪಿಗೆ ಬಂದಿದ್ದ ಸಂದರ್ಭ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಹಳ ಜಟಿಲ ವಿಚಾರವಾಗಿದ್ದು, ವರಿಷ್ಠರು ಹಾಗೂ ಮುಖ್ಯಮಂತ್ರಿ ಸಮಾಲೋಚಿಸಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ. ಯೋಗೀಶ್ವರ್‌ಗೆ ಹಿಂದೆ ಜವಾಬ್ದಾರಿ ಹೊತ್ತು‌ ಕಾರ್ಯ ನಿರ್ವಹಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬದು ವೈಯಕ್ತಿಕ ಅಭಿಪ್ರಾಯ ಎಂದರು.

ಪಕ್ಷದಲ್ಲಿ ಮೂಲ ಬಿಜೆಪಿಗರು, ವಲಸಿಗರು ಎಂಬ ತಾರತಮ್ಯ ಇಲ್ಲ. ವಲಸೆ ಬಂದವರೂ ಸರ್ಕಾರ ರಚನೆಗೆ ಕಾರಣರಾಗಿದ್ದು, ಕುಟುಂಬದ ರೀತಿ‌ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ‌. ಯಾರಿಗೆ ಏನು ಸಲ್ಲಬೇಕು, ಅದು ಪಕ್ಷದಿಂದ ಸಿಗಲಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.