ADVERTISEMENT

ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ತೊಂಬಟ್ಟು ಲಕ್ಷ್ಮಿ ಶರಣಾಗತಿ ನಾಳೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2025, 15:44 IST
Last Updated 1 ಫೆಬ್ರುವರಿ 2025, 15:44 IST
   

ಉಡುಪಿ: ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಲಕ್ಷ್ಮಿ ಅಲಿಯಾಸ್ ತೊಂಬಟ್ಟು ಲಕ್ಷ್ಮಿ ಭಾನುವಾರ ಉಡುಪಿ ಜಿಲ್ಲಾಧಿಕಾರಿ ಮುಂದೆ ಶರಣಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಕುಂದಾಪುರ ತಾಲ್ಲೂಕಿನ ಅಮಾಸೆಬೈಲು ಸಮೀಪದ ತೊಂಬಟ್ಟು ನಿವಾಸಿ ಲಕ್ಷ್ಮಿ ಭಾನುವಾರ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಥವಾ ಜಿಲ್ಲಾಧಿಕಾರಿ ಮುಂದೆ ಶರಣಾಗುವರು’ ಎಂದು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT