ಬಂಧನ
ಉಡುಪಿ: ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬುವವರ ತೋಟದಲ್ಲಿ ಬೆಳೆಸಿದ್ದ ₹ 4 ಲಕ್ಷ ಮೌಲ್ಯದ ಒಟ್ಟು ಒಂಬತ್ತು ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿಕೊಂಡು ಹೋದ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡು ಬೆಳ್ಳೆಯ ಗಣೇಶ್(44), ಎಣ್ಣೆ ಹೊಳೆಯ ಸಂತೋಷ (35) ಬಂಟ್ವಾಳದ ಬಾಳೆಪುಣಿ ಮನೆಯ ಮೊಯ್ದೀನ್ ಯಾನೆ ಮೊಯಿದು ಕುಂಞಿ (60) ಎಂಬುವವರನ್ನು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ವಿಭಾಗದ ಪಿ.ಎಸ್.ಐ. ಪ್ರಸನ್ನ ಎಂ.ಎಸ್. ಮತ್ತು ತನಿಖಾ ವಿಭಾಗದ ಪಿ.ಎಸ್.ಐ. ಸುಂದರ ಅವರ ತಂಡ ಬಂಧಿಸಿದೆ.
ಆರೋಪಿಗಳಿಂದ ಶ್ರೀಗಂಧ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ವಿಚಾರಣೆಯ ವೇಳೆ ಆರೋಪಿಗಳು ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಕೂಡ ಶ್ರೀಗಂಧದ ಮರಗಳನ್ನು ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.