
ಪ್ರಜಾವಾಣಿ ವಾರ್ತೆಹೆಬ್ರಿ: ಹುಲಿಯ ಚರ್ಮ ಹಾಗೂ ಹುಲಿ ಉಗುರು ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಮಂಗಳವಾರ ಪೊಲೀಸರು ಸೋಮೇಶ್ವರ ಚೆಕ್ ಪೋಸ್ಟ್ನಲ್ಲಿ ಬಂಧಿಸಿದ್ದಾರೆ.
ಆರೋಪಿಗಳು ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ಬೈಕ್ಗಳಲ್ಲಿ ಹುಲಿಯ ಎರಡು ಚರ್ಮ ಹಾಗೂ ಉಗುರುಗಳನ್ನು ಸಾಗಿಸುತ್ತಿದ್ದಾಗ ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸುವ ಸಂದರ್ಭ ಸಿಕ್ಕಿಬಿದ್ದಿದ್ದಾರೆ. ಬೈಕ್ ಹಾಗೂ ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹುಲಿ ಚರ್ಮ ಹಾಗೂ ಉಗುರುಗಳನ್ನು ಫೊರೆನ್ಸಿಕ್ ಪ್ರಯೋಗಾಯಲಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಗಳ ವಿಚಾರಣೆ ನಡೆಯುತ್ತಿದ್ದು, ಜಾಲದಲ್ಲಿ ಭಾಗಿಯಾದವರನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.