ADVERTISEMENT

ಟಿಪ್ಪು ಹೆಸರಿನಲ್ಲಿ ಸಲಾಂ ಮಹಾಮಂಗಳಾರತಿ ನಿಲ್ಲಿಸಿ: ವಿಎಚ್‌ಪಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2022, 12:57 IST
Last Updated 26 ಮಾರ್ಚ್ 2022, 12:57 IST
ಕೊಲ್ಲೂರು ದೇವಸ್ಥಾನ
ಕೊಲ್ಲೂರು ದೇವಸ್ಥಾನ   

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರತಿದಿನ ಟಿಪ್ಪು ಹೆಸರಿನಲ್ಲಿ ನಡೆಯುವ ಸಲಾಂ ಮಹಾಮಂಗಳಾರತಿ ನಿಲ್ಲಿಸಬೇಕು ಎಂದು ಎಂದು ವಿಶ್ವ ಹಿಂದೂ ಪರಿಷತ್‌ ಮನವಿ ಸಲ್ಲಿಸಿದೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಐತಿಹಾಸಿಕ ಹಿನ್ನೆಲೆ ಹೊಂದಿರುವ ಪವಿತ್ರ ಕ್ಷೇತ್ರವಾಗಿದ್ದು, 108 ಶಕ್ತಿ ಪೀಠಗಳಲ್ಲಿ ಒಂದಾಗಿದೆ. ಆದಿ ಶಂಕರಾಚಾರ್ಯರು ಮೂಕಾಂಬಿಕಾ ದೇವಿಯನ್ನು ಕೊಲ್ಲೂರಿನಲ್ಲಿ ನೆಲೆಗೊಳಿಸಿದ್ದಾರೆ.

ಮತಾಂಧ ಟಿಪ್ಪು ಹೆಸರಿನಲ್ಲಿ ಕೊಲ್ಲೂರು ದೇವಸ್ಥಾನದಲ್ಲಿ ಪ್ರತಿ ದಿನ ರಾತ್ರಿ 8 ಗಂಟೆಗೆ ಸಲಾಂ ಹೆಸರಿನಲ್ಲಿ ಮಹಾಮಂಗಳಾರತಿ ನಡೆಯುತ್ತಿರುವುದು ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ಉಂಟುಮಾಡಿದೆ.

ADVERTISEMENT

ಸಲಾಂ ಹೆಸರಿನಲ್ಲಿ ನಡೆಯುವ ಮಹಾಮಂಗಳಾರತಿ ಗುಲಾಮಗಿರಿಯ ಸಂಕೇತವಾಗಿದ್ದು, ತಕ್ಷಣ ಕ್ಷೇತ್ರದ ವ್ಯವಸ್ಮಾಪನಾ ಮಂಡಳಿ ಹಾಗೂ ಧಾರ್ಮಿಕ ದತ್ತಿ ಇಲಾಖೆ 'ಸಲಾಂ' ಹೆಸರು ತೆಗೆದುಹಾಕಿ ದೇವರ ಹೆಸರಿನಲ್ಲಿ ಮಹಾಮಂಗಳಾರತಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಮನವಿಯಲ್ಲಿ ಒತ್ತಾಯಿಸಿದೆ.

ಈ ಸಂಬಂಧ ಕೊಲ್ಲೂರು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಕಾರ್ಯ ನಿರ್ವಹಣಾಧಿಕಾರಿ, ಮುಜರಾಯಿ ಸಚಿವೆ, ಜಿಲ್ಲಾಧಿಕಾರಿ, ದತ್ತಿ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.