ADVERTISEMENT

ಬೈಂದೂರು | ರೈಲು: ಮರುನಾಮಕರಣಕ್ಕೆ ಮನವಿ

ಮೂಕಾಂಬಿಕಾ ಎಕ್ಸ್‌ಪ್ರೆಸ್‌: ಪ್ರತಿದಿನ ಸೇವೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 6:45 IST
Last Updated 1 ಆಗಸ್ಟ್ 2025, 6:45 IST
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ವಿವಿಧ ವಿಷಯಗಳನ್ನು ಚರ್ಚಿಸಿದರು
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ವಿವಿಧ ವಿಷಯಗಳನ್ನು ಚರ್ಚಿಸಿದರು   

ಬೈಂದೂರು: ವಾರಕ್ಕೊಮ್ಮೆ ಇರುವ 10215/10216 ಈ ಸಂಖ್ಯೆಯ ರೈಲಿಗೆ ಮೂಕಾಂಬಿಕಾ ಎಕ್ಸ್‌ಪ್ರೆಸ್‌ ಎಂದು ನಾಮಕರಣ ಮಾಡಿ ಪ್ರತಿದಿನ ಸೇವೆ ನೀಡಬೇಕು ಎಂದು ಒತ್ತಾಯಿಸಿ, ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ವಿನಂತಿಸಿದರು.

ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಮೂಲ ಸೌಲಭ್ಯ ಅಭಿವೃದ್ಧಿ, ಬಿಜೂರು ರೈಲು ನಿಲ್ದಾಣ ಹಾಗೂ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕ ಮೆಮು, ಮತ್ಸ್ಯಗಂಧ ಹಾಗೂ ಪಂಚಗಂಗಾ ಎಕ್ಸ್‌ಪ್ರೆಸ್‌ ರೈಲುಗಳಿಗೆ ನಿಲುಗಡೆ ನೀಡುವಂತೆ ಅವರು ಸಚಿವರನ್ನು ವಿನಂತಿಸಿದರು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ರಾಘವೇಂದ್ರ ತಿಳಿಸಿದ್ದಾರೆ.

ರೈಲ್ವೆ ಸಲಹಾ ಮಂಡಳಿಯ ಮಾಜಿ ಸದಸ್ಯ ಬೈಂದೂರಿನ ಕೆ. ವೆಂಕಟೇಶ್ ಕಿಣಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.