ADVERTISEMENT

ಮಣಿಪಾಲದ ಕೆಎಂಸಿಯಲ್ಲಿ ಕೊರೊನಾ ಸೋಂಕು ಶಂಕಿತೆಗೆ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2020, 11:39 IST
Last Updated 11 ಮಾರ್ಚ್ 2020, 11:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಉಡುಪಿ: ಶಂಕಿತ ಕರೊನಾ ಸೋಂಕಿತ ಮಹಿಳೆಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಆಚಾಪುರದವರು ಎಂದು ತಿಳಿದುಬಂದಿದೆ.

68 ವರ್ಷದ ಮಹಿಳೆಯ ಕಫದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ನಿರೀಕ್ಷೆಯಲ್ಲಿದ್ದೇವೆ ಎಂದು ಡಿಎಚ್‌ಒ ಸುಧೀರ್ ಚಂದ್ರ ಸೂಡ ತಿಳಿಸಿದರು.

ಕಳೆದವಾರ ಸೌದಿಯಲ್ಲಿರುವ ಮೆಕ್ಕಾಗೆ ತೆರಳಿದ್ದ ಮಹಿಳೆಗೆ ಜ್ವರ, ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಅಲ್ಲಿಯೇ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಶಿವಮೊಗ್ಗಕ್ಕೆ ಮರಳಿದ್ದರು.

ADVERTISEMENT

ಮತ್ತೆ ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕೆಎಂಸಿಗೆ ಕರೆತರಲಾಗಿದೆ. ಮಹಿಳೆಗೆ ಐಸೊಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಚ್‌ಒ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.