ADVERTISEMENT

ಬಿಪಿನ್ ರಾವತ್‌ಗೆ ಬಿಜೆಪಿ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2021, 15:29 IST
Last Updated 9 ಡಿಸೆಂಬರ್ 2021, 15:29 IST
ತಮಿಳುನಾಡಿನ ಕೂನೂರಿನಲ್ಲಿ ಸೇನೆಯ ಹೆಲಿಕಾಪ್ಟರ್ ದುರಂತದಲ್ಲಿ ಮೃತರಾದ ದೇಶಪ್ರೇಮಿ, ಮೂರು ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರಿಗೆ ಜಿಲ್ಲಾ ಹಾಗೂ ನಗರ ಬಿಜೆಪಿಯಿಂದ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು.
ತಮಿಳುನಾಡಿನ ಕೂನೂರಿನಲ್ಲಿ ಸೇನೆಯ ಹೆಲಿಕಾಪ್ಟರ್ ದುರಂತದಲ್ಲಿ ಮೃತರಾದ ದೇಶಪ್ರೇಮಿ, ಮೂರು ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರಿಗೆ ಜಿಲ್ಲಾ ಹಾಗೂ ನಗರ ಬಿಜೆಪಿಯಿಂದ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು.   

ಉಡುಪಿ: ತಮಿಳುನಾಡಿನ ಕೂನೂರಿನಲ್ಲಿ ಸೇನೆಯ ಹೆಲಿಕಾಪ್ಟರ್ ದುರಂತದಲ್ಲಿ ಮೃತರಾದ ದೇಶಪ್ರೇಮಿ, ಮೂರು ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರಿಗೆ ಜಿಲ್ಲಾ ಹಾಗೂ ನಗರ ಬಿಜೆಪಿಯಿಂದ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಅಪ್ರತಿಮ ಯೋಧರಾಗಿದ್ದ ಮೂರು ಸೇನಾ ಪಡೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ದೇಶದ ಭದ್ರತೆಯ ವಿಚಾರದಲ್ಲಿ ದಿಟ್ಟ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದರು. ರಾವತ್ ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟ. ಅವರ ಸಮರ್ಪಣಾಭಾವದ ದೇಶ ಸೇವೆ ಅಜರಾಮರ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ನಯನಾ ಗಣೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.