ADVERTISEMENT

‘ವಿನಾಶಕಾರಿ ಮೀನುಗಾರಿಕೆ ನಡೆಸಿದರೆ ಕ್ರಮ’

ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2019, 13:59 IST
Last Updated 9 ಅಕ್ಟೋಬರ್ 2019, 13:59 IST

ಉಡುಪಿ: ರಾಜ್ಯ ಸರ್ಕಾರಬುಲ್ ಟ್ರಾಲಿಂಗ್ ಹಾಗೂ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣ ನಿಷೇಧಿಸಿದೆ. ಮೀನುಗಾರರು ವಿನಾಶಕಾರಿ ಮೀನುಗಾರಿಕೆ ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮೀನುಗಾರಿಕಾ ಇಲಾಖೆಉಪ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

ಸಮುದ್ರದಲ್ಲಿ ಚೌರಿ, ಚಿಂದಿ ಬಲೆ, ಕೊಳೆಯುವ ವಸ್ತುಗಳು ಹಾಗೂ ಇನ್ನಿತರ ಸಮುದ್ರ ಮಾಲಿನ್ಯಕಾರಕ ವಸ್ತುಗಳನ್ನು ಹಾಕಿ ಅಸಾಂಪ್ರದಾಯಿಕ ರೀತಿಯಲ್ಲಿ ಕಪ್ಪೆ ಬಂಡಾಸ್ ಮೀನು ಹಿಡಿಯುವುದಕ್ಕೆ ನಿಷೇಧವಿದೆ. ನಿಯಮ ಮೀರಿ ಮೀನುಗಾರಿಕೆ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ.

ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಗರಿಷ್ಟ 350 ಅಶ್ವ ಶಕ್ತಿ ಎಂಜಿನ್ ಅಳವಡಿಸಲು ಅನುಮತಿ ಇದೆ. ಮೀನುಗಾರಿಕಾ ದೋಣಿಗಳಿಗೆ ಕಡ್ಡಾಯವಾಗಿ ಏಕರೂಪದ ಬಣ್ಣಹಚ್ಚಬೇಕು. ಟ್ರಾಲ್ ಮೀನುಗಾರಿಕೆ ದೋಣಿಗಳು ಕಡ್ಡಾಯವಾಗಿ 35 ಎಂ.ಎಂ ಅಳತೆಯ ಸ್ಕ್ವೇರ್ ಮೆಶ್ ಕಾಡ್ ಎಂಡ್ ಬಲೆಯನ್ನು ಉಪಯೋಗಿಸಬೇಕು ಎಂದು ಸೂಚನೆ ನೀಡಿದ್ದಾರೆ.

ADVERTISEMENT

ಪರ್ಸೀನ್ ಮತ್ತು ಔಟ್ ಬೋರ್ಡ್ ಎಂಜಿನ್ ಅಳವಡಿಸಿದ ಮೀನುಗಾರಿಕೆ ದೋಣಿಗಳು ಕಡ್ಡಾಯವಾಗಿ 20 ಎಂಎಂ ಅಳತೆಗಿಂತ ಸಣ್ಣ ಕಣ್ಣಿನ ಬಲೆಗಳನ್ನು ಉಪಯೋಗಿಸಬಾರದು. ಕರಾವಳಿ ತೀರ ಪ್ರದೇಶದಲ್ಲಿ ಪಚ್ಚಿಲೆ (ಗ್ರೀನ್ ಮಸಲ್) ತೆಗೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಷೇಧಿತ ಮೀನುಗಾರಿಕೆಯನ್ನು ನಡೆಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.